ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ಮೊಟಕು: ತುರ್ತು ಸಭೆಯಲ್ಲಿ ಕಾಂಗ್ರೆಸ್​ ನಾಯಕರ ನಿರ್ಧಾರ

Mekedatu
Published on

ರಾಮನಗರ: ಸರ್ಕಾರದ ವಿರೋಧದ ನಡುವೆಯೂ ಕಾಂಗ್ರೆಸ್​ ಆರಂಭಿಸಿದ್ದ ಮೇಕೆದಾಟು ಪಾದಯಾತ್ರೆ 5ನೇ ದಿನಕ್ಕೆ ಮೊಟಕುಗೊಂಡಿದೆ. ಕರೊನಾ ಆರ್ಭಟ ಮುಗಿದ ಬಳಿಕ ಇಲ್ಲಿಂದಲೇ ಮುಂದುವರಿಸಲು ನಿರ್ಧರಿಸಲಾಗಿದೆ.

ಕರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಕ್ಷಕ್ಕೆ ಮುಖಭಂಗ ತಪ್ಪಿಸಲು ತಕ್ಷಣ ಪಾದಯಾತ್ರೆ ನಿಲ್ಲಿಸಿ ಎಂದು ರಾಜ್ಯ ಕಾಂಗ್ರೆಸ್​ ನಾಯಕರಿಗೆ ಎಐಸಿಸಿಯಿಂದ ಸಂದೇಶ ರವಾನೆಯಾದ ಬೆನ್ನಲ್ಲೇ ರಾಮನಗರ ಕಾಂಗ್ರೆಸ್ ಕಚೇರಿಯಲ್ಲಿ ತುರ್ತು ಸಭೆ ನಡೆಸಿದ ಕಾಂಗ್ರೆಸ್​ ನಾಯಕರು, ಈಗ ಪಾದಯಾತ್ರೆ ನಿಲ್ಲಿಸಿ, ಮುಂಬರುವ ದಿನಗಳಲ್ಲಿ ಮತ್ತೆ ಪಾದಯಾತ್ರೆ ನಡೆಸಲು ನಿರ್ಧಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net