ಚಾಕೋಲೆಟ್ ಆಸೆ ತೋರಿಸಿ ಅಪ್ರಾಪ್ತೆ ಮೇಲೆ ದೌರ್ಜನ್ಯ; ಅಪರಾಧಿಗೆ 5 ವರ್ಷ ಜೈಲಿಗೆ

1 Min Read
Delhi Higcourt

ಬೆಂಗಳೂರು: ಚಾಕೋಲೆಟ್ ಆಸೆ ತೋರಿಸಿ 3 ವರ್ಷದ ಬಾಲಕಿ ಮೇಲೆ ದೌರ್ಜನ್ಯ ಎಸಗಿದ್ದ ಅಪರಾಧಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ದೇವರಬಿಸನಹಳ್ಳಿ ನಿವಾಸಿ ಬಾಬು ಅಲಿಯಾಸ್ ಚಂದ್ರಬಾಬು(52) ಅಪರಾಧಿ. 5 ವರ್ಷದ ಜೈಲು ಶಿಕ್ಷೆ 50 ಸಾವಿರ ರೂ. ದಂಡ ವಿಧಿಸಿ 1ನೇ ಎ್ಟಿಎಸ್‌ಸಿ ನ್ಯಾಯಾಲಯ ತೀರ್ಪು ನೀಡಿದೆ.

ತಮಿಳುನಾಡು ಮೂಲದ ಬಾಬು, ಕೆಲಸ ನಿಮಿಕ್ತ ನಗರಕ್ಕೆ ಬಂದು ವೆಲ್ಡಿಂಗ್ ಕೆಲಸ ಮಾಡಿಕೊಂಡು ದೇವರಬಿಸನಹಳ್ಳಿಯಲ್ಲಿ ನೆಲೆಸಿದ್ದ. ಮನೆಯ ಪಕ್ಕದಲ್ಲಿ 3 ವರ್ಷದ ಸಂತ್ರಸ್ತೆ ತನ್ನ ಕುಟುಂಬದ ಜತೆ ನೆಲೆಸಿತ್ತು. ಮಗುವಿನ ತಂದೆ, ತಾಯಿ ಕೆಲಸಕ್ಕೆ ಹೋಗಿದ್ದರು. ಮಧ್ಯಾಹ್ನ ಅಪರಾಧಿ ಬಂದು ಬಾಲಕಿಗೆ ಚಾಕೋಲೆಟ್ ಕೊಡಿಸುವ ನೆಪದಲ್ಲಿ ಮನೆಗೆ ಕರೆದೊಯ್ದು ದೌರ್ಜನ್ಯ ಎಸಗಿದ್ದ. ಪಾಲಕರು ವಾಪಸ್ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿತ್ತು.

ಮಾರತ್‌ಹಳ್ಳಿ ಠಾಣೆಗೆ ಸಂತ್ರಸ್ತ ಬಾಲಕಿ ಪಾಲಕರು ದೂರು ಸಲ್ಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಅಂದಿನ ತನಿಖಾಧಿಕಾರಿ ಸಾಧಿಕ್ ಪಾಷಾ, ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಕೆ.ಎನ್. ರೂಪಾ ಅವರು, ಅಪರಾಧಿ ಎಂದು ೋಷಣೆ ಮಾಡಿ ತೀರ್ಪು ಪ್ರಕಟಿಸಿದ್ದಾರೆ. ಸಂತ್ರಸ್ತೆಗೆ ಸರ್ಕಾರದಿಂದ 1 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಪಬ್ಲಿಕ್ ಪ್ರಾಸಿಕ್ಯೂಟರ್‌ರಾಗಿ ಪಿ. ಕೃಷ್ಣವೇಣಿ ವಾದ ಮಂಡಿಸಿದ್ದರು.

See also  17 ವರ್ಷದ ಮಗನನ್ನು ತಾಯಿಯೇ ಕೊಂದಳು!; ದಿನಾಲೂ ಮಗ ಪೀಡಿಸುತ್ತಿದ್ದುದಾದರೂ ಯಾಕೆ?
Share This Article