More

    5 ವರ್ಷದಲ್ಲಿ ದಕ್ಷಿಣ ಭಾರತದ ಪ್ರಮುಖ ಯಾತ್ರಾ ಸ್ಥಳ ಆಗಲಿದೆ ಮಲೆ ಮಹದೇಶ್ವರ ಬೆಟ್ಟ

    ಬೆಂಗಳೂರು: ಮುಂದಿನ 5 ವರ್ಷಗಳಲ್ಲಿ ಮಲೆ ಮಹದೇಶ್ವರ ಬೆಟ್ಟ ದಕ್ಷಿಣ ಕರ್ನಾಟಕ ಮಾತ್ರವಲ್ಲದೆ, ದಕ್ಷಿಣ ಭಾರತದಲ್ಲಿ ಪ್ರಮುಖ ಯಾತ್ರಾ ಸ್ಥಳವಾಗಿ ಅಭಿವೃದ್ಧಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

    ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಹದೇಶ್ವರಸ್ವಾಮಿ ಮೈಸೂರಿನಿಂದ ಬೆಂಗಳೂರಿನವರೆಗೆ ಪ್ರತಿಯೊಬ್ಬರೂ ನಡೆದುಕೊಳ್ಳುವ ಧಾರ್ವಿುಕ ಕ್ಷೇತ್ರವಾಗಿದೆ. ಇತ್ತೀಚಿನ ದಿನಗಳಲ್ಲಿ ಇದರ ಅಭಿವೃದ್ಧಿಗೆ ಚಿಂತನೆ ನಡೆದು ವೇಗವನ್ನೂ ಪಡೆದುಕೊಂಡಿದೆ. ಇದಕ್ಕೆ ಮುಖ್ಯ ಕಾರಣ ಬಿ.ಎಸ್.ಯಡಿಯೂರಪ್ಪ, ಅವರು ದೊಡ್ಡ ಪ್ರಮಾಣದಲ್ಲಿ ಅನುದಾನವನ್ನು ಒದಗಿಸಿದ್ದರು ಎಂದರು. ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಶೀಘ್ರದಲ್ಲಿಯೇ ಕ್ಷೇತ್ರಕ್ಕೆ ಭೇಟಿ ನೀಡಿ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

    ಹಿಂದೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವಿ.ಸೋಮಣ್ಣ ಹಾಗೂ ಸುರೇಶ್​ಕುಮಾರ್ ಈ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಮಹದೇಶ್ವರ ಬೆಟ್ಟದ ಅಭಿವೃದ್ಧಿಗೆ ಈಗಾಗಲೆ ಪ್ರಾಧಿಕಾರ ಯೋಜನೆ ರೂಪಿಸಿರುವುದನ್ನು ಜಾರಿಗೊಳಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.

    ಮಲೈ ಮಹಾದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಮುಜರಾಯಿ ಸಚಿವೆ ಮಾತನಾಡಿ, ಬೆಟ್ಟದ ಅಭಿವೃದ್ಧಿ ಕಾರ್ಯಗಳನ್ನು ಹಾಗೂ ಬಹಳಷ್ಟು ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಸರ್ಕಾರ ಈ ನಿಟ್ಟಿನಲ್ಲಿ ಎಲ್ಲ ರೀತಿಯ ಸಹಕಾರ ನೀಡಲು ಸದಾ ಸಿದ್ದವಿದೆ ಎಂದು ಹೇಳಿದರು.

    ಪ್ರತಿಮೆ ಸ್ಥಾಪನೆ: ಮಹದೇಶ್ವರ ಬೆಟ್ಟದಲ್ಲಿ 20 ಎಕರೆ ಪ್ರದೇಶದಲ್ಲಿ ನೂರಡಿ ಎತ್ತರದ ಮಾದಪ್ಪನ ಪ್ರತಿಮೆ ನಿರ್ಮಾಣ ಕಾಮಗಾರಿ ಪ್ರಗತಿ ಕುರಿತು ಚರ್ಚಿಸಲಾಯಿತು. ಮಲೈ ಮಹಾದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಯೋಜನೆ ರೂಪಿಸುವ ಕುರಿತು ಸಭೆಯಲ್ಲಿ ನಿರ್ಧರಿಸಲಾಯಿತು.

    ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ಸುನೀಲ್​ಕುಮಾರ್, ಶಾಸಕರಾದ ಎನ್.ಮಹೇಶ್, ಪುಟ್ಟರಂಗ ಶೆಟ್ಟಿ, ನರೇಂದ್ರ, ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರಾಜೀವ್, ಮಲೈ ಮಹಾದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಉಪಸ್ಥಿತರಿದ್ದರು.

    ಪದೇಪದೆ ಸರ್ಪಗಳು ಬರುತ್ತಿವೆ… ಎಂದು ಮನೆಯಲ್ಲಿ ಬಾವಿ ತೋಡಿದ ದಂಪತಿ! ವಾರದ ಬಳಿಕ ಕಾದಿತ್ತು ಶಾಕ್​

    ನನ್ನ ತಂದೆ​ಗೆ ಹಲವು ಕಾಲ್​ಗರ್ಲ್​​ ಜತೆ ಸಂಪರ್ಕ ಇತ್ತು, ಅವನೊಬ್ಬ ಕಾಮುಕ, ಮಹಿಳೆಯರನ್ನ ಟ್ರ್ಯಾಪ್​ ಮಾಡ್ತಿದ್ದ…

    ವಿದ್ಯಾರ್ಥಿಯ ತಾಯಿಯನ್ನ ಪೀಡಿಸಿ ತರಗತಿಯಲ್ಲೇ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts