

ಮಂಗಳೂರು: ಇತ್ತ ಮನೆ ಮುಂದಿನ ಬಾವಿಗೆ ಹಾರಿ ಗಂಡ ಸತ್ತರೆ, ಅತ್ತ ಮನೆಯ ಮಹಡಿ ಮೇಲೆ ನೇಣುಬಿಗಿದುಕೊಂಡು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕದ್ರಿ ಬಳಿಯ ಪಿಂಟೋಸ್ ಲೇನ್ನಲ್ಲಿ ಬುಧವಾರ ಸಂಭವಿಸಿದೆ.
ಸುರೇಶ್ (62) ಮತ್ತು ವಾಣಿ (55) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಇವರ ಕುಟುಂಬಸ್ಥರು ಕೆಳ ಮಹಡಿಯಲ್ಲಿ ವಾಸ ಮಾಡುತ್ತಿದ್ದು, ಮೇಲಿನ ಮಹಡಿಯಲ್ಲಿ ದಂಪತಿ ವಾಸವಿದ್ದರು. ಇವರಿಬ್ಬರೂ ಸಾವಿಗೂ ಮುನ್ನ ಬರೆದಿಟ್ಟಿದ್ದ ಡೆತ್ನೋಟ್ ಪೊಲೀಸರ ಕೈಗೆ ಸಿಕ್ಕಿದೆ. ಇದನ್ನೂ ಓದಿರಿ ವರದಕ್ಷಿಣೆ ದಾಹಕ್ಕೆ ಸಿವಿಲ್ ಇಂಜಿನಿಯರ್ ಪತ್ನಿ ಬಲಿ! ಮದ್ವೆ ಆದ ದಿನದಿಂದ ಗಂಡ ಕೊಟ್ಟ ಕಿರುಕುಳ ಅಷ್ಟಿಷ್ಟಲ್ಲ
ಸುರೇಶ್ ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ವಾಣಿ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಬಾವಿಯಿಂದ ಸುರೇಶ್ ಮೃತದೇಹ ತೆಗೆಯಲಾಗಿದೆ. ಡೆತ್ ನೋಟ್ನಲ್ಲಿ ಚಿಟ್ ಫಂಡ್ ನಷ್ಟದ ಬಗ್ಗೆ ಬರೆದು ದಂಪತಿ ಇಬ್ಬರೂ ಸಾವಿನ ಮನೆಯ ಕದ ತಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿರಿ ಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ
ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸ್ ಕಮಿಷನರ್ ಶಶಿಕುಮಾರ್ ಮಾತನಾಡಿ, ದಂಪತಿಗಳ ಆತ್ಮಹತ್ಯೆ ಕೆಟ್ಟ ನಿರ್ಧಾರ. ಚೀಟಿ ವ್ಯವಹಾರ, ಹಣಕಾಸು ಸಮಸ್ಯೆ ಇದ್ದಲ್ಲಿ ಹೇಳಿಕೊಳ್ಳಬಹುದಿತ್ತು. ಈ ಲಾಕ್ಡೌನ್ ಸಮಯದಲ್ಲಿ ಸಾಕಷ್ಟು ಜನರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಮಧ್ಯೆ ಹಲವೆಡೆ ಹೆಚ್ಚಿನ ದರದಲ್ಲಿ ಬಡ್ಡಿ ವಸೂಲಿ ಮಾಡ್ತಿರೋದು ಗಮನಕ್ಕೆ ಬಂದಿದೆ. ಇಂಥವರ ವಿರುದ್ಧ ಎಕ್ಸೋರ್ಬಿಟಂಟ್ ರೇಟ್ ಆಫ್ ಇಂಟ್ರೆಸ್ಟ್ ಆ್ಯಕ್ಟ್ನಡಿ ಪ್ರಕರಣ ದಾಖಲಿಸಲು ಅವಕಾಶ ಇದೆ. ಅತಿಯಾದ ಬಡ್ಡಿ ವಸೂಲಿಗೆ ಒತ್ತಡ, ಬೆದರಿಕೆ ಹಾಕಿದಲ್ಲಿ ಸ್ಥಳೀಯ ಠಾಣೆಗೆ ದೂರು ನೀಡಿ. ಚೀಟಿ ವ್ಯವಹಾರ ಮಾಡುವ ಹಲವರು ಆತ್ಮಹತ್ಯೆ ಮಾಡಿಕೊಳ್ಳುವ ಇಲ್ಲವೇ ಊರು ಬಿಟ್ಟು ಹೋಗುವ ಕೆಲ ಮಾಡುತ್ತಿದ್ದಾರೆ. ಇಂಥಹ ರಿಸ್ಕ್ ತೆಗೆದುಕೊಳ್ಳದೆ ಸುರಕ್ಷಿತ ಹಣಕಾಸು ವ್ಯವಹಾರ ಮಾಡಿದ್ರೆ ಉತ್ತಮ. ಕಮಿಷನರೇಟ್ ವ್ಯಾಪ್ತಿಯಲ್ಲಿ ಹೆಚ್ಚಿನ ಬಡ್ಡಿ ವಸೂಲಿ ಕಂಡುಬಂದರೆ ದೂರು ಕೊಡಿ. ಸೂಕ್ತ ಕಾನೂನು ಕ್ರಮಕ್ಕೆ ನಮ್ಮ ಎಲ್ಲ ಅಧಿಕಾರಿಗಳಿಗೆ ಸೂಚನೆ ಕೊಡುತ್ತೇನೆ ಎಂದರು.