ನನ್ನ ತಂದೆ ಆರೋಗ್ಯವಾಗಿದ್ದಾರೆ, ದಯವಿಟ್ಟು ಯಾರೂ ವದಂತಿಗೆ ಕಿವಿಗೊಡಬೇಡಿ: ಹಂಸಲೇಖರ ಪುತ್ರಿ ಮನವಿ

Hamsalekha
Published on

ಬೆಂಗಳೂರು: ಹಿರಿಯ ಸಂಗೀತ ನಿರ್ದೇಶಕ ಮತ್ತು ಗೀತರಚನೆಕಾರ ಹಂಸಲೇಖ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಮತ್ತು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಸುದ್ದಿಯೊಂದು ಸೋಮವಾರ ಮಧ್ಯಾಹ್ನ ಕೇಳಿಬಂದಿತ್ತು. ಆದರೆ, ಇದೊಂದು ವದಂತಿ, ಹಂಸಲೇಖ ಅವರು ಆರೋಗ್ಯವಾಗಿದ್ದಾರೆ ಎಂದು ಹಂಸಲೇಖ ಅವರ ಪುತ್ರಿ ತೇಜಸ್ವಿನಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ತೇಜಸ್ವಿನಿ, "ನಮ್ಮ ತಂದೆಯವರ ಆರೋಗ್ಯದ ಬಗ್ಗೆ ಹಾಗೂ ಅವರು ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬಂದಿದೆ. ಈ ಸುಳ್ಳು ಸುದ್ದಿ ಕೇಳಿ ಅಭಿಮಾನಿಗಳು ಆತಂಕ ಪಡಬಾರದು. ನನ್ನ ತಂದೆ ಚೆನ್ನಾಗಿಯೇ ಇದ್ದಾರೆ. ದಯವಿಟ್ಟು ವದಂತಿ ಹರಡದಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಬೆಂಗಳೂರಿನ ರಾಜಾಜಿನಗರದ ಫಸ್ಟ್ ಬ್ಲಾಕ್‌ನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ಒಂದು ದಿನದ ಮಟ್ಟಿಗೆ ಹಂಸಲೇಖ ಆಸ್ಪತ್ರೆಯಲ್ಲಿ ಉಳಿಯಲಿದ್ದಾರೆ ಎಂಬ ಸೋಮವಾರ ಸುದ್ದಿ ಹರಿದಾಡಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net