ಇಂದಿನಿಂದ ಗುರುವಾರ ಮಧ್ಯಾಹ್ನದ ವರೆಗೆ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ಬಂದ್​

ಮೈಸೂರು: ಇಂದಿನಿಂದ ಗುರುವಾರ ಮಧ್ಯಾಹ್ನದ ವರೆಗೆ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ. ನಾಳೆ(ಅ.6) ಮಹಾಲಯ ಅಮಾವಾಸ್ಯೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬರುವ ಸಾಧ್ಯತೆ ಇದೆ. ರಾಜ್ಯ, ಹೊರ ರಾಜ್ಯದಿಂದಲೂ ಶ್ರೀ ಚಾಮುಂಡೇಶ್ವರಿ ದರ್ಶನ ಪಡೆಯಲು ಭಕ್ತರು ಬರಲಿದ್ದು, ಜನಸಂದಣಿ ಹೆಚ್ಚಾಗುವ ನಿರೀಕ್ಷೆ ಇದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಇಂದು(ಅ.5) ಬೆಳಗಿನ ಜಾವ 4 ಗಂಟೆಯಿಂದ ಗುರುವಾರ(ಅ.7) ಮಧ್ಯಾಹ್ನ ದವರೆಗೂ ನಿರ್ಬಂಧ ವಿಧಿಸಲಾಗಿದೆ. … Continue reading ಇಂದಿನಿಂದ ಗುರುವಾರ ಮಧ್ಯಾಹ್ನದ ವರೆಗೆ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ಬಂದ್​