ಅಧಿದೇವತೆ ಚಾಮುಂಡಿಗೆ ಪುಷ್ಪಾರ್ಚನೆ ಮಾಡಿ ನಾಡಹಬ್ಬ ದಸರಾಗೆ ಚಾಲನೆ ನೀಡಿದ ರಾಷ್ಟ್ರಪತಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ವಿಧ್ಯುಕ್ತ ಚಾಲನೆ ಸಿಕ್ಕಿದೆ. ಇಂದು(ಸೋಮವಾರ) ಬೆಳಗ್ಗೆ 9.45ರಿಂದ 10.05ರ ವರೆಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಅಧಿದೇವತೆ ಚಾಮುಂಡಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉದ್ಘಾಟಿಸಲಾಯಿತು. ಇದಕ್ಕೂ ಮುನ್ನ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಗರ್ಭಗುಡಿಯಲ್ಲಿ ಕೆಲ ನಿಮಿಷ ಪ್ರಾರ್ಥನೆ ಸಲ್ಲಿಸಿದ ರಾಷ್ಟ್ರಪತಿ, ದೀಪ ಬೆಳಗಿಸಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ದಸರಾಗೆ ಚಾಲನೆ ನೀಡಿದರು. … Continue reading ಅಧಿದೇವತೆ ಚಾಮುಂಡಿಗೆ ಪುಷ್ಪಾರ್ಚನೆ ಮಾಡಿ ನಾಡಹಬ್ಬ ದಸರಾಗೆ ಚಾಲನೆ ನೀಡಿದ ರಾಷ್ಟ್ರಪತಿ