More

    ಮೈಸೂರಲ್ಲಿ ಗ್ಯಾಂಗ್​ ರೇಪ್​: ಆರೋಪಿಗಳಲ್ಲೊಬ್ಬ ಭಗ್ನಪ್ರೇಮಿ! ಲವ್​ ಫೇಲ್ಯೂರ್​ಗೆ ಲೈಂಗಿಕ ಚಟ ಅಂಟಿಸಿಕೊಂಡಿದ್ದ…

    ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್​ರೇಪ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನದ ಹಿಂದೆ ಐವರು, ನಿನ್ನೆ(ಸೋಮವಾರ) ತಡರಾತ್ರಿ ಓರ್ವ ಸೇರಿ ಒಟ್ಟು 6 ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

    ಪೊಲೀಸರು ಬಂಧಿತರ ವಿಚಾರಣೆ ನಡೆಸಿದ ವೇಳೆ ಆರೋಪಿಯೊಬ್ಬ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ. ಮೊದಲು ಸಿಕ್ಕಿಬಿದ್ದ ಐವರು ಆರೋಪಿಗಳ ಪೈಕಿ ಓರ್ವ ಜೇಬಿನಲ್ಲಿ ಸದಾ ಕಾಂಡೋಮ್​ ಇಟ್ಟುಕೊಂಡೇ ತಿರುಗಾಡುತ್ತಿದ್ದ. ಈ ಗ್ಯಾಂಗ್​ನಲ್ಲಿ ಈತನೇ ನಟೋರಿಯಸ್​ ಕಾಮುಕ ಎಂಬ ಸ್ಫೋಟಕ ಅಂಶ ವಿಚಾರಣೆ ವೇಳೆ ಬಯಲಾಗಿದೆ. ಅಷ್ಟೇ ಅಲ್ಲ, ಈತ ಭಗ್ನ ಪ್ರೇಮಿಯಾಗಿದ್ದು, ಮೂವರು ಯುವತಿಯರು ಈತನನ್ನು ಪ್ರೀತಿಸಿ ಕೈಕೊಟ್ಟಿದ್ದಾರಂತೆ. ಇದರಿಂದ ಬೇಸತ್ತು ವಿಕೃತನಾಗಿದ್ದು, ಹಗಲಿನಲ್ಲಿ ನಿದ್ರಿಸುತ್ತಿದ್ದ. ರಾತ್ರಿ ವೇಳೆ ನಿರ್ಜನ ಪ್ರದೇಶದಲ್ಲಿ ಓಡಾಡುವ ಮಹಿಳೆಯರು, ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ. ಅದಕ್ಕಾಗಿಯೇ ಯಾವಾಗಲೂ ಕಾಂಡೋಮ್​​ ಅನ್ನು ಜೇಬಿನಲ್ಲಿ ಇಟ್ಟುಕೊಂಡಿರುತ್ತಿದ್ದ. ಮಹಿಳೆಯರನ್ನು ವಿಕೃತವಾಗಿ ಹಿಂಸಿಸುವುದನ್ನು ರೂಢಿ ಮಾಡಿಕೊಂಡಿದ್ದನಂತೆ.

    ಆರೋಪಿಗಳ ಪ್ರಕಾರ, ಮೈಸೂರು ಅವರ ಅಪರಾಧ ಕೃತ್ಯಗಳಿಗೆ ಹೇಳಿ ಮಾಡಿಸಿದಂತಹ ಸ್ಥಳವಾಗಿದ್ದು, ಹೊರವಲಯದ ನಿರ್ಜನ ಪ್ರದೇಶಗಳಲ್ಲಿ ಕುಳಿತುಕೊಳ್ಳುವ ಜೋಡಿಗಳೇ ಇವರ ಟಾರ್ಗೆಟ್​ ಆಗಿತ್ತು. ತಮ್ಮೂರಿನಲ್ಲಿ ಜೇಬು ಖಾಲಿಯಾದಾಗ ಮೈಸೂರಿನ ಕಡೆ ಮುಖ ಮಾಡುತ್ತಿದ್ದ ಆರೋಪಿಗಳು ಚಾಮುಂಡಿಬೆಟ್ಟದ ತಪ್ಪಲಿನ ನಿರ್ಜನ ಪ್ರದೇಶಕ್ಕೆ ಬಂದು ದರೋಡೆ, ಸುಲಿಗೆ ಮಾಡುತ್ತಿದ್ದರು. ಕೃತ್ಯಕ್ಕೆ ಮುಂದಾದಾಗಲೆಲ್ಲ ಮೈಸೂರಿನಲ್ಲಿ ಕೆಲಸ ಮಾಡುತ್ತೇವೆ ಎಂಬ ನೆಪದಲ್ಲಿ ಇಲ್ಲಿಗೆ ಆಗಮಿಸುತ್ತಿದ್ದರು ಎಂಬ ಮಾಹಿತಿ ಹೊರಬಿದ್ದಿದೆ.

    ಆರೋಪಿಗಳು ತಮ್ಮ ಜೇಬು ಖಾಲಿಯಾದಾಗಲೆಲ್ಲ ಮೈಸೂರಿನ ಕಡೆಗೆ ಬಂದು ದರೋಡೆ ಮಾಡುತ್ತಿದ್ದರು. ಅಂತೆಯಯೇ 3 ವರ್ಷಗಳಿಂದ ಮೈಸೂರಿಗೆ ಬರುತ್ತಿದ್ದರು. ಜಿಲ್ಲೆಯಲ್ಲಿ 20ಕ್ಕೂ ಹೆಚ್ಚು ದರೋಡೆ, ಲೈಂಗಿಕ ದೌರ್ಜನ್ಯ ಕೃತ್ಯಗಳಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಅಲ್ಲದೆ, ಶ್ರೀಗಂಧದ ಮರ ಕಳ್ಳತನದ 10ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಇದೇ ರೀತಿ ಒಡವೆ, ಹಣ ಮೊಬೈಲ್​ಗಳನ್ನು ದೋಚಿದ್ದರು. ನಿರ್ಜನ ಪ್ರದೇಶಕ್ಕೆ ಮಹಿಳೆಯರು, ಯುವತಿಯರ ಜತೆ ಯಾರೇ ಹೋದರೂ ಅವರ ಬಳಿ ವಸೂಲಿ ಮಾಡುತ್ತಿದ್ದರು. ಲೈಂಗಿಕ ದೌರ್ಜನ್ಯವೆಸಗುತ್ತಿದ್ದರು.

    ಇನ್ನು ಗ್ಯಾಂಗ್​ ರೇಪ್​ ಕೇಸ್​ನಲ್ಲಿ ಸಿಕ್ಕಿಬಿದ್ದ ಆರೋಪಿಗಳು ಈ ಹಿಂದೆಯೂ ಅತ್ಯಾಚಾರ, ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಮಂಪರು ಪರೀಕ್ಷೆಗೆ ಒಳಪಡಿಸಲು ಪೊಲೀಸರು ಚಿಂತನೆ ನಡೆಸಿದ್ದಾರೆ.

    ಅವ್ರು ದೊಡ್ಡವ್ರು ಬೇಡವ್ವ.. ಅಂದ್ರೂ ಮದ್ವೆ ಆಗ್ತೀನಂತ ಹಠ ಹಿಡಿದು ಅವನೊಂದಿಗೇ ಬಾರದ ಲೋಕಕ್ಕೆ ಹೋಗಿಬಿಟ್ಲು…

    ಅತ್ಯಾಚಾರ ಆರೋಪಿ ಅನುಮಾನಾಸ್ಪದ ಸಾವು: ಪಿಎಸ್​ಐ ಸೇರಿ ಐವರು ಪೊಲೀಸರ ಅಮಾನತು

    ಮೈಸೂರಲ್ಲಿ ಗ್ಯಾಂಗ್​ ರೇಪ್​ ಸಂತ್ರಸ್ತೆ ಆಸ್ಪತ್ರೆಯಿಂದ ಡಿಸ್ಚಾರ್ಜ್​: ನಾನು ದೂರು ಕೊಡಲ್ಲ, ನನ್ನನ್ನು ಬಿಟ್ಟುಬಿಡಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts