More

    ಮೈಸೂರು ದಸರಾ: ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಮೆರವಣಿಗೆಯಲ್ಲಿ ಅರಮನೆಗೆ ಬಂದ ಉತ್ಸವ ಮೂರ್ತಿ

    ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಬಾರಿಯಲ್ಲಿ ಸಾಗುವ ನಾಡ ದೇವತೆ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಇದೇ ಮೊದಲ ಬಾರಿಗೆ ಮೆರವಣಿಗೆ ಮೂಲಕ ಚಾಮುಂಡಿ ಬೆಟ್ಟದಿಂದ ಅರಮನೆಗೆ ಕರೆತರಲಾಯಿತು.

    ಚಾಮುಂಡಿ ದೇವಸ್ಥಾನ ಮುಂಭಾಗ ಅಲಂಕೃತ ವಾಹನದಲ್ಲಿದ್ದ ಉತ್ಸವ ಮೂರ್ತಿಗೆ ಸಚಿವ ಸೋಮಶೇಖರ್ ಅವರು ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಮಂಗಳವಾದ್ಯದೊಂದಿಗೆ ಉತ್ಸವ ಮೂರ್ತಿಯೊಂದಿಗೆ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿದರು. ಅಲಂಕೃತಗೊಂಡ ದೇವಿಯನ್ನು ನೋಡಲು ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದುಬಂದಿತ್ತು. ನಾದಸ್ವರ ತಂಡ, ಪೊಲೀಸ್ ಬ್ಯಾಂಡ್, ಭಜನಾ ತಂಡ, ವೇದಘೋಷದೊಂದಿಗೆ ತೆರೆದ ವಾಹನದಲ್ಲಿ ಅರಮನೆಗೆ ಕರೆತರುತ್ತಿದ್ದ ಉತ್ಸವ ಮೂರ್ತಿಯನ್ನು ಕಣ್ತುಂಬಿಕೊಳ್ಳಲು ಬೆಟ್ಟದ ಪ್ರವೇಶದ್ವಾರ, ರಸ್ತೆಯ ಇಕ್ಕೆಲಗಳಲ್ಲಿ ಭಕ್ತ ಸಾಗರ ಮೆರೆದಿತ್ತು. ಉತ್ಸವ ಮೂರ್ತಿ ಸಾಗುವ ಮಾರ್ಗದ ರಸ್ತೆಯಲ್ಲಿ ಹೂಗಳನ್ನು ಚೆಲ್ಲಿ ದೇವಿಯನ್ನು ಬರಮಾಡಿಕೊಳ್ಳಲಾಯಿತು. ಇದಕ್ಕೂ ಮುನ್ನ ಮುಂಜಾನೆಯೇ ಯುವತಿಯರು-ಮಹಿಳೆಯರು ಬೆಟ್ಟದ ಪಾದದಿಂದ ರಸ್ತೆಯುದ್ದಕ್ಕೂ ರಂಗೋಲಿ ಬಿಡಿಸಿ ಬಣ್ಣ ಹಚ್ಚಿದ್ದರು.

    ಬೆಟ್ಟದ ಪ್ರವೇಶದ್ವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್, ದಸರಾ ಮಹೋತ್ಸವ ಮನಸಿಗೆ ತೃಪ್ತಿ ತಂದಿದೆ. ಕನಸು ಮನಸಿನಲ್ಲೂ ಎಣಿಸಿರಲಿಲ್ಲ. ತಂದೆ ತಾಯಿ ಆಶೀರ್ವಾದ, ಜನಪ್ರತಿನಿಧಿಗಳು, ಅಧಿಕಾರಿಗಳ ಸಹಕಾರದಿಂದ ದಸರಾ ಮಹೋತ್ಸವ ಸುಸೂತ್ರವಾಗಿ ನೆರವೇರುತ್ತಿದೆ. ಎಲ್ಲರಿಗೂ ಈ ಮೂಲಕ ಧನ್ಯವಾದ ತಿಳಿಸುತ್ತೇನೆ ಎಂದರು.

    ಮೈಸೂರು ದಸರಾ: ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಮೆರವಣಿಗೆಯಲ್ಲಿ ಅರಮನೆಗೆ ಬಂದ ಉತ್ಸವ ಮೂರ್ತಿ

    ಉತ್ಸವ ಮೂರ್ತಿಗೆ ಚಾಲನೆ ನೀಡುವ ವೇಳೆ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಮೂಡಾ ಅಧ್ಯಕ್ಷ ರಾಜೀವ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಗಳ ಅಧ್ಯಕ್ಷ ಅಪ್ಪಣ್ಣ, ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಡಾ. ಶಶಿಶೇಖರ್ ದೀಕ್ಷಿತ್, ನಿಗಮ ಮಂಡಳಿಗಳ ಅಧ್ಯಕ್ಷರು ಉಪಸ್ಥಿತರಿದ್ದರು.

    ಮೈಸೂರಿನ ಜಂಬೂಸವಾರಿಯಲ್ಲಿ ಈ 6 ಸ್ತಬ್ಧಚಿತ್ರಗಳಿಗಷ್ಟೇ ಅವಕಾಶ

    ಕೋಟಿಗೊಬ್ಬ-3 ರಿಲೀಸ್​: ಮುಗಿಲು ಮುಟ್ಟಿದೆ ಅಭಿಮಾನಿಗಳ ಹರ್ಷೋದ್ಘಾರ

    ಹಿರಿಯ ನಟ, ಚಿಂತಕ ಪ್ರೊ. ಜಿ.ಕೆ.ಗೋವಿಂದ ರಾವ್ ನಿಧನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts