More

    ನನ್ಗೆ ತೊಂದ್ರೆ ಕೊಟ್ರು, ಕೆಲ್ಸ ಮಾಡೋಕೆ ಬಿಡ್ಲಿಲ್ಲ… ಎನ್ನುತ್ತಲೇ ಭೂಮಾಫಿಯಾ ಬಗ್ಗೆ ಬಿಚ್ಚಿಟ್ಟ ಸಿಂಧೂರಿ

    ಮೈಸೂರು: ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಆದಾಗಿನಿಂದ ಜಿಲ್ಲೆಯ ಜನಪ್ರತಿನಿಧಿಗಳು ನಿರಂತರವಾಗಿ ಅವರ ವಿರುದ್ಧ ಕಿಡಿಕಾರಿದ್ದು, ಕರೊನಾ ನಿರ್ವಹಣೆ ಹಾಗೂ ಚಾಮರಾಜನಗರ ಆಕ್ಸಿಜನ್​ ದುರಂತದ ಹೆಸರಲ್ಲಿ ರೋಹಿಣಿ ವಿರುದ್ಧ ಇಡೀ ರಾಜಕೀಯ ನಾಯಕರು ಎದುರಾಗಿ ನಿಂತದ್ದು, ಈ ಮಧ್ಯೆ ಮೈಸೂರು ಮಹಾನಗರ ಪಾಲಿಕೆಯ ಆಯಕ್ತೆ ಶಿಲ್ಪಾನಾಗ್​ ರಾಜೀನಾಮೆ ನೀಡಿ, ರೋಹಿಣಿ ವಿರುದ್ಧ ಕಿರುಕುಳ ಆರೋಪ ಮಾಡಿದ್ದು, ಐಎಎಸ್​ ಅಧಿಕಾರಿಗಳಿಬ್ಬರ ಕಿತ್ತಾಟದ ಬೆನ್ನಲ್ಲೇ ರೋಹಿಣಿ ಮತ್ತು ಶಿಲ್ಪಾನಾಗ್​ ಇಬ್ಬರನ್ನೂ ಸರ್ಕಾರ ವರ್ಗಾವಣೆ ಮಾಡಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿತ್ತು.ಈ ಬೆನ್ನಲ್ಲೇ ಮೈಸೂರಿನಲ್ಲಿ ದಿಗ್ವಿಜಯ ನ್ಯೂಸ್​ ಜತೆ ಮಾತನಾಡಿದ ರೋಹಿಣಿ ಸಿಂಧೂರಿ ಅವರು ಭೂ ಮಾಫಿಯಾ ಬಗ್ಗೆ ಮಹತ್ವದ ಮಾಹಿತಿ ಹೊರಹಾಕಿದ್ದಾರೆ.

    ‘ಮೈಸೂರು ಜಿಲ್ಲೆಯಲ್ಲಿ ನನಗೆ ಕೆಲಸ ಮಾಡಲು ಬಿಡಲಿಲ್ಲ. ಕೆಲವರು ಅನಗತ್ಯವಾಗಿ ತೊಂದರೆ ಕೊಟ್ಟರು‌. ಭೂಮಿ ಒತ್ತುವರಿ ತೆರವು ಮಾಡಲು ನಾನು ಪ್ರಯತ್ನ ಮಾಡಿದ್ದೆ. ಕೆರೆಗಳನ್ನು ಉಳಿಸೋದು, ಸರ್ಕಾರಿ ಭೂಮಿ ರಕ್ಷಣೆ ಮಾಡೋದು ನನ್ನ ಆದ್ಯತೆ ಆಗಿತ್ತು. ಆ ನಿಟ್ಟಿನಲ್ಲಿ ಮೊದಲ ದಿನದಿಂದಲೂ ಕಾರ್ಯ ನಿರ್ವಹಿಸುತ್ತಿದೆ. ಕೇರ್ಗಳ್ಳಿ ಕೆರೆಯ ಒತ್ತುವರಿ ತೆರವು ಮಾಡಿ ನೀರು ತುಂಬಿಸಲು ಪ್ರಯತ್ನಿಸಿದ್ದೆ. ಅದರ ಜತೆಗೆ ಸರ್ವೇ ನಂ.4ರ 1500 ಎಕರೆ ಜಾಗ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್‌ನಲ್ಲೂ ಒಳ್ಳೆಯ ಲಾಯರ್ ಇಟ್ಟು ಹೋರಾಟ ಮಾಡುತ್ತಿದ್ದೇವೆ. ವರ್ಗಾವಣೆಯನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. 7 ತಿಂಗಳ ಅವಧಿಯಲ್ಲಿ ನಾನು ಉತ್ತಮ ಕೆಲಸ ಮಾಡಿದ್ದೇನೆ. ಈ ಅವಧಿಯಲ್ಲಿ ಏನೇನಾಯ್ತು ಅಂತ ಎಲ್ಲರಿಗೂ ಗೊತ್ತಿದೆ. ಕೆಲವರು ವರ್ಗಾವಣೆ ಆಗುವಂತಹ ವಾತಾವರಣ ಸೃಷ್ಟಿ ಮಾಡಿದರು. ಅದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಕೆಲವರು ಹತಾಶೆಯಿಂದ ಮಾತನಾಡಿದ್ದಾರೆ. ಅವರ ಬಗ್ಗೆ ನನಗೆ ಮರುಕ ಇದೆ’ ಎಂದು ರೋಹಿಣಿ ಸಿಂಧೂರಿ ಹೇಳಿದರು. 

    ಶಿಲ್ಪಾನಾಗ್ ಬಗ್ಗೆ ನನಗೆ ಅನುಕಂಪ ಇದೆ. ಅವರ ಮಾತಲ್ಲಿ ಇನ್‌ಸೆಕ್ಯೂರಿಟಿ ಕಾಣಿಸುತ್ತಿದೆ. ಆ ಹತಾಸೆಯಿಂದಲೇ ಅವರು ನನ್ನ ಬಗ್ಗೆ ಆರೋಪ ಮಾಡುತ್ತಿದ್ದಾರೆ. ಅವರ ಮೇಲೆ ನನಗೆ ಮರಕ ಉಂಟಾಗುತ್ತಿದೆ. ಅಷ್ಟು ಮಾತ್ರ ನಾನು ಹೇಳಬಲ್ಲೆ. ಅದರಾಚೆಗೆ ನಾನು ಏನೂ ಹೇಳಲಾರೆ. ಐಎಎಸ್ ಅಧಿಕಾರಿಗಳಾದವರಿಗೆ ಪ್ರತಿಯೊಂದಕ್ಕೂ ಪ್ರೊಸೀಜರ್ ಇದೆ. ಆ ಚೌಕಟ್ಟಿನಲ್ಲೇ ನಾನು ಕೆಲಸ ಮಾಡಿದ್ದೇನೆ ಎಂದು ರೋಹಿಣಿ ಸಿಂಧೂರಿ ಹೇಳಿದರು.

    ಕೋವಿಡ್ ನಿಯಂತ್ರಣಕ್ಕೂ ಪ್ರಾಮುಖ್ಯತೆ ಕೊಟ್ಟು ಕೆಲಸ ಮಾಡಿದ್ದೇನೆ. ವ್ಯಾಕ್ಸಿನೇಷನ್‌‌ನಲ್ಲಿ ಮೈಸೂರು ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಜುಲೈ ವೇಳೆಗೆ ಮೈಸೂರನ್ನು ಕರೊನಾ ಮುಕ್ತ ಅಂತ ಘೋಷಣೆ ಮಾಡಬೇಕು ಅನ್ನುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇನೆ. ಮೈಸೂರಿನ ಜನ ನನ್ನನ್ನು ಮನೆ ಮಗಳಂತೆ ಕಂಡಿದ್ದಾರೆ. ತವರು ಮನೆ ಬಿಟ್ಟು ಹೋಗುವ ಭಾವನೆ ನನಗೆ ಆಗುತ್ತಿದೆ. ಮೈಸೂರಿಗೆ ಜನತೆಗೆ ನನ್ನ ಧನ್ಯವಾದಗಳು ಎಂದು ರೋಹಿಣಿ ಸಿಂಧೂರಿ ಭಾವನಾತ್ಮಕ ನುಡಿಗಳನ್ನಾಡಿದರು.

    ಸದ್ಯ ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿ ಹಾಗೂ ಶಿಲ್ಪಾನಾಗ್ ಅವರನ್ನು ಆರ್​​ಡಿಪಿಆರ್ ನಿರ್ದೇಶಕರಾಗಿ ಸರ್ಕಾರ ವರ್ಗಾವಣೆ ಮಾಡಿದೆ.

    PHOTOS| ಅನ್​ಲಾಕ್​ಗೂ ಮುನ್ನವೇ ಗಂಟು ಮೂಟೆ ಸಮೇತ ಬೆಂಗಳೂರಿನತ್ತ ಪ್ರಯಾಣ

    ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!

    https://www.vijayavani.net/a-with-lovers-help-buries-body-at-homewoman-kills-husband-in-mumbai/https://www.vijayavani.net/a-woman-married-house-bihar-police/

    ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts