More

    ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮೂವರು ಗಣ್ಯರಿಗೆ ನಾಡೋಜ ಪ್ರಶಸ್ತಿ

    ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಸಾಹಿತಿಗಳಾದ ಗೊ.ರು.ಚನ್ನಬಸಪ್ಪ, ಡಾ. ಭಾಷ್ಯಂ ಸ್ವಾಮಿ, ಪ್ರೊ.ಟಿ. ವೆಂಕಟಾಚಲ ಶಾಸ್ತ್ರಿ ಅವರಿಗೆ ನಾಡೋಜ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

    ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿವಿ ಕುಲಪತಿ ಪ್ರೊ.ಸ.ಚಿ.ರಮೇಶ, ಏ.12ರಂದು ಸಂಜೆ 5.30ಕ್ಕೆ ವಿವಿ ಆವರಣದ ನವರಂಗ ಬಯಲು ರಂಗಮಂದಿರದಲ್ಲಿ ನಡೆಯಲಿರುವ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮೂವರು ಸಾಧಕರಿಗೂ ನಾಡೋಜ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. ಜಾನಪದ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗೊ.ರು.ಚನ್ನಬಸಪ್ಪ, ಸಂಸ್ಕೃತದಿಂದ ಕನ್ನಡಕ್ಕೆ ಹಲವು ಪುಸ್ತಕಗಳನ್ನು ಅನುವಾದ ಮಾಡಿರುವ ಸಂಸ್ಕೃತ ತಜ್ಞ ಮೈಸೂರಿನ ಡಾ. ಭಾಷ್ಯಂ ಸ್ವಾಮಿ ಹಾಗೂ ಶಾಸ್ತ್ರ ಸಾಹಿತ್ಯ ಬಗ್ಗೆ ಅಪಾರ ಜ್ಞಾನ ಹೊಂದಿರುವ ಪ್ರೊ.ಟಿ. ವೆಂಕಟಾಚಲ ಶಾಸ್ತ್ರಿ ಅವರಿಗೆ ನಾಡೋಜ ಪ್ರಶಸ್ತಿ ನೀಡ ವಿಶ್ವವಿದ್ಯಾಲಯವು ಗೌರವಿಸಲಿದೆ ಎಂದರು.

    ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ, ಚಿತ್ರದುರ್ಗದ ಶ್ರೀ ಮುರುಘಾ ಶರಣರು, ಬಿ.ಎಸ್.ಪುಟ್ಟಸ್ವಾಮಿ, ಕಲಕುಳಿ ವಿಠ್ಠಲ ಹೆಗ್ಡೆ ಅವರಿಗೆ ಡಿಲೀಟ್ ಪದವಿ ನೀಡಲಾಗುತ್ತಿದೆ ಎಂದು ಕುಲಪತಿಗಳು ತಿಳಿಸಿದರು.

    ಬೆಂಗ್ಳೂರಲ್ಲಿ ಹಾಡಹಗಲೇ ಮಗನಿಗೆ ಬೆಂಕಿ ಇಟ್ಟು ಕೊಂದ ತಂದೆ! ಅಪ್ಪಾ.. ಪ್ಲೀಸ್​ ಬೇಡಪ್ಪ… ಅಂದ್ರೂ ಕರಗಲಿಲ್ಲ ಕ್ರೂರಿ ಮನಸ್ಸು

    ಹುಬ್ಬಳ್ಳಿಯಲ್ಲಿ ಲವ್​ ಜಿಹಾದ್​ ಕೇಸ್​ಗೆ ಸ್ಫೋಟಕ ತಿರುವು: ಮುತಾಲಿಕ್​ ಕೊಟ್ಟ ಗಡುವಿನೊಳಗೇ ಠಾಣೆಗೆ ಬಂದ ಯುವತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts