More

    ಸಾಂಸ್ಕೃತಿಕ ನಗರಿ ಮೈಸೂರಲ್ಲಿ ‘ನಮೋ’ ಯೋಗ: 45 ನಿಮಿಷದಲ್ಲಿ ಯಾವೆಲ್ಲ ಯೋಗಾಸನ ಮಾಡಿದ್ರು ಗೊತ್ತಾ?

    ಮೈಸೂರು: ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಆಕರ್ಷಿಸುವ ವಿಶ್ವವಿಖ್ಯಾತ ಮೈಸೂರು ಅರಮನೆ ಇಂದು ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜರುಗಿದ ವಿಶ್ವ ಯೋಗ ದಿನಾಚರಣೆಯ ಸಮಾರಂಭ ಚರಿತ್ರಾರ್ಹ ಕ್ಷಣಗಳಿಗೆ ವೇದಿಕೆ ಆಯಿತು. ಮೋದಿ ನೇತೃತ್ವದಲ್ಲಿ 45 ನಿಮಿಷ ಕಾಲ ನಡೆದ ಸಾಮೂಹಿಕ ಯೋಗ ಪ್ರದರ್ಶನದಲ್ಲಿ 15 ಸಾವಿರ ಜನ ಯೋಗ ಮಾಡಿ ಗಮನ ಸೆಳೆದರು.

    ಮಂಗಳವಾರ ಬೆಳಗ್ಗೆ 7ರಿಂದ 7.45ರ ವರೆಗೆ ಒಟ್ಟು 19 ಆಸನಗಳು ಪ್ರದರ್ಶನಗೊಂಡವು. ಇದರಲ್ಲಿ ಮೊದಲ ಒಂದು ನಿಮಿಷ ಪ್ರಾರ್ಥನೆ, 4 ನಿಮಿಷ ಚಲನಕ್ರಿಯೆ, 25 ನಿಮಿಷ ತಾಡಾಸನ, ವೃಕ್ಷಾಸನ, ಪಾದಹಸ್ತಾಸನ-1, ಪಾದಹಸ್ತಾಸನ-2, ಅರ್ಧಚಕ್ರಾಸನ, ತ್ರಿಕೋನಾಸನ, ಸಮದಂಡಾಸನ, ಭದ್ರಾಸನ, ವಜ್ರಾಸನ, ಅರ್ಧಉಷ್ಟ್ರಾಸನ, ಉಷ್ಟ್ರಾಸನ, ಶಶಂಕಾಸನ, ಉತ್ಥಾನ ಮಂಡೂಕಾಸನ, ವಕ್ರಾಸನ, ಮಕರಾಸನ, ಸರಳ ಭುಜಂಗಾಸನ, ಭುಜಂಗಾಸನ, ಶಲಭಾಸನ, ಸೇತುಬಂಧಾಸನ, ಉತ್ಥಾನ ಪಾದಾಸನ, ಅರ್ಧಹಲಾಸನ, ಪವನಮುಕ್ತಾಸನ, ಶವಾಸನ ಪ್ರದರ್ಶನ ನಡೆಯಲಿವೆ. ಬಳಿಕ 14 ನಿಮಿಷ ಪ್ರಾಣಾಯಾಮ, ಧ್ಯಾನ, ಸಂಕಲ್ಪ. ಒಂದು ನಿಮಿಷ ಶಾಂತಿಮಂತ್ರ, ಎರಡು ನಿಮಿಷ ಸಂಕಲ್ಪ… ಹೀಗೆ ಒಟ್ಟು 19 ಆಸನಗಳ ಪ್ರದರ್ಶನ ನಡೆಯಿತು.

    ಮೈಸೂರಲ್ಲಿ ನಮೋ ಯೋಗ: 15 ಸಾವಿರ ಯೋಗಪಟುಗಳ ಜತೆ ಮೋದಿ

    ಯೋಗ ವ್ಯಕ್ತಿಗಾಗಿ ಮಾತ್ರವಲ್ಲ ಅದು ಮನುಕುಲದ ಒಳಿತಿಗಾಗಿ, ವಿಶ್ವಕ್ಕೆ ಶಾಂತಿ ನೀಡುವ ಶಕ್ತಿ ಯೋಗಕ್ಕಿದೆ: ಪ್ರಧಾನಿ ಮೋದಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts