More

    ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಷ್ಟ್ರ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ

    ಕಾರವಾರ: ಭ್ರಷ್ಟಾಚಾರ ದೇಶದ ಜ್ವಲಂತ ಸಮಸ್ಯೆಗಳಲ್ಲಿ ಒಂದಾಗಿದೆ. ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಷ್ಟ್ರ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಮೂಲಕ ರಾಷ್ಟ್ರದ ಪ್ರಗತಿಗಾಗಿ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧೀಶ ಮಾಯಾಣ್ಣ ಬಿ.ಎಲ್. ಹೇಳಿದರು.
    ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮತ್ತು ಕರ್ನಾಟಕ ಲೋಕಾಯುಕ್ತ ಜಿಲ್ಲಾ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಸಪ್ತಾಹ ಉದ್ಘಾಟಿಸಿ ಮಾತನಾಡಿದರು.
    ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಮ್ಮ ಕೆಲಸಗಳಿಗೆ ಪ್ರತಿಫಲ ಬಯಸದೇ ಸಿಕ್ಕ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಂಡು, ಸಾರ್ವಜನಿಕರ ಕೆಲಸಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಿ, ದೇಶದ ಪ್ರಗತಿಗೆ ಪಣತೊಡಬೇಕು ಎಂದರು.
    ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ,ನೌಕರರಾದ ನಾವುಗಳು ಸಾರ್ವಜನಿಕರ ಸೇವೆ ಮಾಡಲು ಸರ್ಕಾರಿ ಕೆಲಸಕ್ಕೆ ಸೇರಿದ್ದು ಎಂಬುದನ್ನು ಅರಿತುಕೊಂಡು ಕರ್ತವ್ಯ ನಿರ್ವಹಿಸಿದಾಗ ಜನಸಾಮಾನ್ಯರ ಬಹುತೇಕ ಕೆಲಸ ಕಾರ್ಯಗಳು ಸುಗಮವಾಗಿ ಸಾಗುತ್ತದೆ ಎಂದರು. ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ ಎಸ್‌. ದರಗದ,ಜನತೆ ಎಚ್ಚೆತ್ತುಕೊಳ್ಳದಿದ್ದರೆ ಸಮಾಜದಲ್ಲಿನ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ ಎಂದರು.ಜಿ.ಪಂ. ಸಿಇಒ ಈಶ್ವರಕುಮಾರ ಕಾಂದೂ, ಭ್ರಷ್ಟಾಚಾರದ ವಿರುದ್ಧ ಸಮಾಜದಲ್ಲಿ ಅರಿವು ಮೂಡಿಸುವ ಕಾರ್ಯ ನಮ್ಮಿಂದಲೇ ಪ್ರಾರಂಭವಾಗಬೇಕು ಎಂದರು.
    ಲೋಕಾಯುಕ್ತ ಅಧೀಕ್ಷಕ ಕುಮಾರಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್‌ಪಿ ಎನ್. ವಿಷ್ಣುವರ್ಧನ,ಎಡಿಸಿ ಪ್ರಕಾಶ ರಾಜಪೂತ,ಕಾರವಾರ ಎಸಿ ಜಯಲಕ್ಷ್ಮೀ ರಾಯಕೋಡ ಇದ್ದರು. ಭ್ರಷ್ಟಾಚಾರ ನಿರ್ಮೂಲನೆ ಕುರಿತು ಇದೇ ಸಂದರ್ಭದಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts