More

    ಮತ್ತೊಂದು ದಾಖಲೆ ಬರೆದ ಚಿನ್ನದ ಹುಡುಗ ನೀರಜ್​ ಜೋಪ್ರಾ: ಫಿನ್‌ಲ್ಯಾಂಡ್‌ ಸ್ಪರ್ಧೆಯಲ್ಲಿ ಬೆಳ್ಳಿ ಪದಕ

    ದೆಹಲಿ: ಟೋಕಿಯೋ ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದ ಭಾರತದ ಜಾವೆಲಿನ್ ಥ್ರೋ ಅಥ್ಲೀಟ್ ನೀರಜ್​​ ಚೋಪ್ರಾ, ಇದೀಗ ಮತ್ತೊಂದು ದಾಖಲೆ ಬರೆದಿದ್ದಾರೆ. ಫಿನ್‌ಲ್ಯಾಂಡ್‌ನಲ್ಲಿ ನಡೆದ ಪಾವೊ ನೂರ್ಮಿ ಗೇಮ್ಸ್‌ನಲ್ಲಿ 89.30 ಮೀಟರ್ ದೂರಕ್ಕೆ ಜಾವೆಲಿನ್ ಎಸೆದು ಬೆಳ್ಳಿ ಪದಕದೊಂದಿಗೆ ತಮ್ಮ ಹಿಂದಿನ ರಾಷ್ಟ್ರೀಯ ದಾಖಲೆಯನ್ನು ಮುರಿದಿದ್ದಾರೆ.

    24 ವರ್ಷ ವಯಸ್ಸಿನ ನೀರಜ್​, 2021ರ ಆಗಸ್ಟ್​ 7ರಂದು ಟೋಕಿಯೋ ಒಲಿಂಪಿಕ್ಸ್​ನಲ್ಲಿ 87.58 ಮೀಟರ್​ ದೂರಕ್ಕೆ ಜಾವೆಲಿನ್​ ಎಸೆದು ಸ್ವರ್ಣ ಪದಕಕ್ಕೆ ಮುತ್ತಿಟ್ಟಿದ್ದರು. 2021ರ ಮಾರ್ಚ್​ನಲ್ಲಿ ಪಟಿಯಾಲಾದಲ್ಲಿ ಜಾವೆಲಿನ್​ ಅನ್ನು 88.07 ಮೀಟರ್​ ದೂರಕ್ಕೆ ಎಸೆದು ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದರು. ಈಗ ಫಿನ್‌ಲ್ಯಾಂಡ್‌ನ ಸ್ಪರ್ಧೆಯ ಮೊದಲ ಸುತ್ತಿನಲ್ಲಿ 86.92 ಮೀಸರ್​ ದೂರಕ್ಕೆ ಜಾವೆಲಿನ್​ ಎಸೆದ ನೀರಜ್​, 2ನೇ ಅವಕಾಶದಲ್ಲಿ 89.30 ಮೀಟರ್​ ದೂರಕ್ಕೆ ಜಾವೆಲಿನ್​ ಮುಟ್ಟಿಸಿದರು. ಆ ಮೂಲಕ ತನ್ನದೇ ಹಿಂದಿನ ದಾಖಲೆಯನ್ನು ಮುರಿದರು. ಇನ್ನು ಫಿನ್‌ಲ್ಯಾಂಡ್‌ನ 25 ವಯಸ್ಸಿನ ಓಲಿವರ್​ ಹೆಲಾಂಡರ್​ 2ನೇ ಅವಕಾಶದಲ್ಲಿ 89.83ಮೀಟರ್​ ದೂರಕ್ಕೆ ಜಾವೆಲಿನ್​ ಎಸೆದು ಚಿನ್ನದ ಪದಕ ಗೆದ್ದರು. ಗ್ರೆನಡಾದ ಆ್ಯಂಡರ್​ಸನ್​ ಪೀಟರ್ಸ್​ ಅವರು 86.60 ಮೀಟರ್​ ದೂರಕ್ಕೆ ಎಸೆದು 3ನೇ ಸ್ಥಾನ ಪಡೆದರು.

    ಒಲಿಂಪಿಕ್ಸ್​ ಅಥ್ಲೆಟಿಕ್ಸ್​ನಲ್ಲಿ ಭಾರತಕ್ಕೆ ಮೊಟ್ಟಮೊದಲ ಬಾರಿಗೆ ಸ್ವರ್ಣ ಪದಕ ತಂದು ಕೊಟ್ಟ ಕೀರ್ತಿ ಕೂಡ ಹರಿಯಾಣ ಮೂಲದ ನೀರಜ್​ ಚೋಪ್ರಾಗೆ ಸಲ್ಲುತ್ತೆ. ಟೋಕಿಯೋ ಒಲಿಂಪಿಕ್ಸ್ ಬಳಿಕ ನೀರಜ್, ಪಾಲ್ಗೊಂಡ ಮೊದಲ ಅಂತಾರಾಷ್ಟ್ರೀಯ ಕ್ರೀಡಾಕೂಟ ಫಿನ್‌ಲ್ಯಾಂಡ್‌ನಲ್ಲಿ ನಡೆದ ಈ ಸ್ಪರ್ಧೆಯಾಗಿದೆ.

    ಮತ್ತೊಂದು ದಾಖಲೆ ಬರೆದ ಚಿನ್ನದ ಹುಡುಗ ನೀರಜ್​ ಜೋಪ್ರಾ: ಫಿನ್‌ಲ್ಯಾಂಡ್‌ ಸ್ಪರ್ಧೆಯಲ್ಲಿ ಬೆಳ್ಳಿ ಪದಕ

    ಬೆಳ್ಳಿ ಗೆದ್ದು ದಾಖಲೆ ಮಾಡಿದ ನೀರಜ್ ಚೋಪ್ರಾ ಅವರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಶುಭಾಶಯ ತಿಳಿಸಿದರು.

    ಮತ್ತೊಂದು ದಾಖಲೆ ಬರೆದ ಚಿನ್ನದ ಹುಡುಗ ನೀರಜ್​ ಜೋಪ್ರಾ: ಫಿನ್‌ಲ್ಯಾಂಡ್‌ ಸ್ಪರ್ಧೆಯಲ್ಲಿ ಬೆಳ್ಳಿ ಪದಕ

     

    VIDEO| ಅಂಡರ್​ವಾಟರ್​ ಜಾವೆಲಿನ್​! ಚಿನ್ನದ ಹುಡುಗ ನೀರಜ್​ ಚೋಪ್ರಾರ ಈ ವಿಡಿಯೋ ನೋಡಿ

    ಅಕ್ಕನ ಚಿತೆಗೆ ಹಾರಿ ಪ್ರಾಣಬಿಟ್ಟ ತಮ್ಮ! ನೋವಲ್ಲೇ 430km ದೂರದಿಂದ ಬಂದವ ನೋಡನೋಡುತ್ತಿದ್ದಂತೆ ಸುಟ್ಟು ಕರಕಲಾದ

    ಬಿಜೆಪಿ ಶಾಸಕರ ದಬ್ಬಾಳಿಕೆ? ಹಾವೇರಿಯಲ್ಲಿ ಓರ್ವ ಮಹಿಳೆ ಸೇರಿ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts