More

    ಒಲಿಂಪಿಕ್ಸ್​: ಚಿನ್ನದ ಹುಡುಗ ನೀರಜ್​ ಚೋಪ್ರಾಗೆ ಅಭಿನಂದನೆಗಳ ಸುರಿಮಳೆ: 6 ಕೋಟಿ ರೂ. ಬಹುಮಾನ ಘೋಷಿಸಿದ ಹರಿಯಾಣ

    ದೆಹಲಿ: ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಪಾಲಿಗೆ ಸಂಭ್ರಮದ ಕ್ಷಣ. ಜಾವಲಿನ್​ ಎಸೆತದಲ್ಲಿ ಹರಿಯಾಣ ಮೂಲದ ನೀರಜ್​ ಚೋಪ್ರಾ ಚಿನ್ನದ ಪದಕ ಗೆದ್ದು ಐತಿಹಾಸಿಕ ಸಾಧನೆ ತೋರಿದ್ದಾರೆ. ಒಲಿಂಪಿಕ್ಸ್​ ಅಥ್ಲೆಟಿಕ್ಸ್​ನಲ್ಲಿ ಭಾರತಕ್ಕೆ ಮೊಟ್ಟಮೊದಲ ಬಾರಿಗೆ ಸ್ವರ್ಣ ಪದಕವನ್ನು ತಂದು ಕೊಟ್ಟ ಕೀರ್ತಿ ನೀರಜ್​ಗೆ ಸಲ್ಲುತ್ತೆ.

    ಚಿನ್ನದ ಹುಡುಗ ನೀರಜ್​ಗೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಜತೆಗೆ ಸರ್ಕಾರವೂ ಬಹುಮಾನ ಘೋಷಿಸಿದೆ.  ಪ್ರಧಾನಿ ನರೇಂದ್ರ ಮೋದಿ ಅವರು, ‘ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತ ಇತಿಹಾಸ ಬರೆದಿದೆ. ನೀರಜ್​ ಚೋಪ್ರಾ ಅವರ ಇಂದಿನ ಸಾಧನೆ ಅವಿಸ್ಮರಣೀಯ. ಅವರ ಸಾಧನೆ ಮತ್ತು ಉತ್ಸಾಹ ಎಲ್ಲರಿಗೂ ಪ್ರೇರಣೆ. ಚಿನ್ನ ಗೆದ್ದ ನೀರಜ್​ ಅವರಿಗೆ ಅಭಿನಂದನೆಗಳು’ ಎಂದು ಟ್ವೀಟ್​ ಮಾಡಿದ್ದಾರೆ.

    ‘ನೀರಜ್​ ಸಾಧಾನೆ ಇತಿಹಾಸ ಸೃಷ್ಟಿಸಿದೆ’ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ ಅವರು ಪ್ರಶಂಸಿಸಿದ್ದಾರೆ. ‘ಜಾವೆಲಿನ್ ಥ್ರೋನಲ್ಲಿ ಚಿನ್ನ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ ನೀರಜ್‌ ಚೋಪ್ರಾ ಅವರಿಗೆ ಹೃತ್ಫೂರ್ವಕ ಅಭಿನಂದನೆಗಳು. ದೇಶಕ್ಕೆ ಒಂದು ಹೆಮ್ಮೆಯ ಕ್ಷಣ…’ ಎಂದು ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವರು ಟ್ವೀಟ್​ ಮಾಡಿದ್ದಾರೆ.

    ಚಿನ್ನದ ಹುಡುಗ ನೀರಜ್​ಗೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಜತೆಗೆ ಸರ್ಕಾರವೂ ಬಹುಮಾನ ಘೋಷಿಸಿದೆ. ಹರಿಯಾಣ ಸರ್ಕಾರ 6 ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ.

    ಒಲಿಂಪಿಕ್ಸ್​ನಲ್ಲಿ ಭಾರತದ ಐತಿಹಾಸಿಕ ಸಾಧನೆ: ಚಿನ್ನಕ್ಕೆ ಮುತ್ತಿಟ್ಟ ನೀರಜ್ ಚೋಪ್ರ

    ಭಾರತಕ್ಕೆ ಮತ್ತೊಂದು ಪದಕ: ಕಂಚು ಗೆದ್ದ ಕುಸ್ತಿಪಟು ಬಜರಂಗ್ ಪೂನಿಯ

    ಒಂದೇ ಮನೆಯಲ್ಲಿದ್ದರು ಪತ್ನಿ-ಪತಿ-ಸ್ನೇಹಿತ! ಪೊಲೀಸರ ಮುಂದೆ ಬಯಲಾಯ್ತು ಚೆಂದುಳ್ಳಿ ಚೆಲುವೆಯ ಅಸಲಿ ಮುಖ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts