More

    ನೀಟ್​ ಪರೀಕ್ಷೆ ವಿಳಂಬ, ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕ ರದ್ದು: ಸಚಿವ ಡಾ. ಅಶ್ವತ್ಥನಾರಾಯಣ

    ರಾಮನಗರ: ನೀಟ್​ ಪರೀಕ್ಷೆ ವಿಳಂಬದಿಂದಾಗಿ ಈಗಾಗಲೇ ಇಂಜಿನಿಯರಿಂಗ್​ ಸೀಟು ಪಡೆದುಕೊಂಡು, ಈಗ ವೈದ್ಯಕೀಯ ಕೋರ್ಸ್​ಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ರದ್ದು ಪಡಿಸಲಾಗಿದೆ. ಹಾಗೆಯೇ ಈ ವರ್ಷ ವಿದ್ಯಾರ್ಥಿಗಳಿಂದ ಸಂಗ್ರಹ ಮಾಡಿದ್ದ ಶುಲ್ಕವನ್ನೂ ಹಿಂದಿರುಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ(ಕೆಇಎ) ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್​. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ವಿನಾಯಿತಿ ಈ ವರ್ಷಕ್ಕೆ ಮಾತ್ರ ಅನ್ವಯಿಸಲಿದೆ. ಸಾಮಾನ್ಯವಾಗಿ ಇಂಜಿನಿಯರಿಂಗ್​ ಮತ್ತು ವೈದ್ಯಕೀಯ ಸೀಟು ಹಂಚಿಕೆ ಒಟ್ಟಿಗೆ ನಡೆಯುತ್ತಿತ್ತು. ಆದರೆ ಈ ವರ್ಷ ನೀಟ್​ ಪರೀಕ್ಷಾ ವಿಚಾರ ಕೋರ್ಟ್​ ಮೆಟ್ಟಿಲೇರಿದ್ದರಿಂದ ವೈದ್ಯಕೀಯ ಸೀಟು ಹಂಚಿಕೆ ಪ್ರಕ್ರಿಯೆ ವಿಳಂಬವಾಗಿದೆ. ಹೀಗಾಗಿ, ಅನಿಶ್ಚಿತ ಪರಿಸ್ಥಿತಿ ತಲೆದೋರಿದೆ. ಇದರಿಂದಾಗಿ, ಈಗಾಗಲೇ ಇಂಜಿನಿಯರಿಂಗ್​ ಕೋರ್ಸ್​ಗಳಿಗೆ ಪ್ರವೇಶ ಪಡೆದಿರುವವರಿಗೆ ಈಗ ವೈದ್ಯಕೀಯ ಸೀಟು ಸಿಕ್ಕಿದ್ದರೆ, ಆಸಕ್ತರು ಅಲ್ಲಿಗೆ ಹೋಗಬಹುದು. ಪ್ರವೇಶ ಪಡೆದ ನಂತರ ಸೀಟು ಬಿಟ್ಟು ಹೋಗುವವರಿಗೆ ಶುಲ್ಕದ ಐದು ಪಟ್ಟು ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಇದೆ. ಆದರೆ ಈ ಬಾರಿ ಇದಕ್ಕೆ ವಿನಾಯಿತಿ ನೀಡಲಾಗಿದೆ ಎಂದರು.

    ಬೆಂಗಳೂರಲ್ಲಿ ಒಣ ಕೊಂಬೆ ಬಿದ್ದು ಕೋಮಾದಲ್ಲಿದ್ದ ಬಾಲಕಿ ಸಾವು: 702 ದಿನ ಸತತ ಚಿಕಿತ್ಸೆಯ ನಂತರವೂ ಬದುಕಲಿಲ್ಲ…

    ಪ್ರೇಮ ವಿವಾಹವಾದ್ರೂ ಮತ್ತೊಬ್ಬನ ಮೇಲೆ ಮೋಹ: ಪುರುಷನ ಚಪ್ಪಲಿ, ಪ್ರಸಾದದ ಬ್ಯಾಗು ಬಿಚ್ಚಿಟ್ಟ ಭಯಾನಕ ರಹಸ್ಯವಿದು

    ನಗ್ನಚಿತ್ರ ನೋಡುವ ಗೀಳು… ಪ್ರೇಯಸಿಯ ತಾಯಿ ಮೊಬೈಲ್​ಗೆ ವಿಡಿಯೋ ಕಳಿಸಿ ಆತ ಕೊಟ್ಟ ಕಾಟ ಅಷ್ಟಿಷ್ಟಲ್ಲ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts