More

    ಸೀನಿಯರ್ಸ್‌ ಮನಸ್ಸು ಮಾಡಿದ್ರೆ ಶಾಲೆಗೆ ಹೊಸ ಲುಕ್

    ತ್ಯಾಗರ್ತಿ: ಶಿಕ್ಷಣ ನಮಗೆಲ್ಲ ಬದುಕು ಕಟ್ಟಿಕೊಟ್ಟಿದೆ. ನಮಗೆ ವಿದ್ಯೆ ಕಲಿಸಿದ ಗುರುಗಳನ್ನು ಗೌರವಿಸುವ ಸಂಪ್ರದಾಯವನ್ನು ಮೊದಲು ರೂಢಿಸಿಕೊಳ್ಳಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

    ಸಮೀಪದ ಬರೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಬೆಳ್ಳಿ ಹಬ್ಬ ಹಾಗೂ ಗುರುವಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿರಿಯ ವಿದ್ಯಾರ್ಥಿಗಳು ತಾವು ಓದಿದ ವಿದ್ಯಾಸಂಸ್ಥೆಗಳ ಅಭಿವೃದ್ಧಿಗೆ ಸಹಕಾರ ನೀಡಬೇಕು. 2011ರಲ್ಲಿ ನಾನು ಶಾಸಕನಾಗಿದ್ದಾಗ ಈ ಕಾಲೇಜಿಗೆ ಸರ್ಕಾರದಿಂದ ಸುಸಜ್ಜಿತ ಕಟ್ಟಡ ನಿರ್ಮಿಸಿ ಕೊಡಲಾಗಿತ್ತು. ಬಳಿಕ ಕಳೆಗುಂದಿತ್ತು. ಇದೀಗ ಅಭಿವೃದ್ಧಿ ಸಮಿತಿ ರಚಿಸಿ, ಉನ್ನತ ಹುದ್ದೆಯಲ್ಲಿರುವ ಹಳೆಯ ವಿದ್ಯಾರ್ಥಿಗಳ ಸಹಕಾರ ಪಡೆದು ಕಾಲೇಜಿಗೆ ಬಣ್ಣ ಮಾಡಿಸಲಾಗುತ್ತಿದೆ. ಹಳೆಯ ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ಶಿಕ್ಷಣ ಸಂಸ್ಥೆಗಳನ್ನು ಆಧುನಿಕ ರೀತಿಯಲ್ಲಿ ಅಭಿವೃದ್ಧಿ ಪಡಿಸಬಹುದು. ಸರ್ಕಾರವೇ ಎಲ್ಲ ಮಾಡಲು ಸಾಧ್ಯವಿಲ್ಲ. ಕಾಲೇಜು ಸ್ಥಾಪನೆಗೆ ಕಾಗೋಡು ತಿಮ್ಮಪ್ಪ ಅವರ ಕೊಡುಗೆ ಸ್ಮರಣೀಯ ಎಂದರು.
    ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಮಾತನಾಡಿ, ಹಳ್ಳಿಯ ಬದುಕು ಸುಸಂಸ್ಕೃತವಾಗಿ ಬೆಳೆದಿದೆ ಎನ್ನುವುದಕ್ಕೆ ಈ ಕಾರ್ಯಕ್ರಮವೇ ಸಾಕ್ಷಿ. ಈ ಕಾರ್ಯಕ್ರಮ ಸ್ಥಳೀಯರಿಗೆ ಹೊಸ ಶಕ್ತಿ ತಂದುಕೊಟ್ಟಿದೆ. ಇಪ್ಪತ್ತು ವರ್ಷಗಳ ಹಿಂದೆ ಇಲ್ಲಿನ ಹಳ್ಳಿಯ ಸ್ಥಿತಿಗಳನ್ನು ನೆನಪು ಮಾಡಿಕೊಂಡರೆ ಕಣ್ಣೀರು ಬರುತ್ತದೆ ಎಂದು ಭಾವುಕರಾದರು.
    ಕಾಲೇಜಿನ ನಿವೃತ್ತ ಉಪನ್ಯಾಸಕರನ್ನು ಸನ್ಮಾನಿಸಲಾಯಿತು. ಹಿರಿಯ ವಿದ್ಯಾರ್ಥಿಗಳು ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾದರು.
    ಕಿರುತೆರೆ ಕಲಾವಿದರಾದ ಸುಹಾನ ಸೈಯದ್, ನಾಗರಾಜ್ ತೊಬ್ರಿ ಜಾನಪದ ಗಾಯನ ಹಾಗೂ ವರ್ಷಾ, ಯಶವಂತ, ಸಂತೋಷ ವಿಠ್ಠಲ ರಂಗದೋಳ್, ಶಿವಾನಂದ ಕೊಟ್ಟೂರೇಶ್ವರ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಾನಪದ ನೃತ್ಯ, ಡೊಳ್ಳು ಕುಣಿತ, ಯಕ್ಷಗಾನ ನಡೆಯಿತು.
    ಬರೂರು ಗ್ರಾಪಂ ಅಧ್ಯಕ್ಷ ಎಚ್.ಮಂಜುನಾಥ್, ಉಪಾಧ್ಯಕ್ಷೆ ಅನ್ನಪೂರ್ಣಾ ಪುಟ್ಟಪ್ಪ, ಪ್ರಾಚಾರ್ಯೆ ಪ್ರೇಮಲತಾ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ, ಬಿಇಒ ಪರಶುರಾಮಪ್ಪ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎನ್.ಡಿ.ಶಿವಕುಮಾರ್, ಹಳೆಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ವಿನಯ್‌ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಸ್ವಾಮಿ, ಪ್ರಮುಖರಾದ ದಾಮೋದರ್, ನಾಗರಾಜ್ ನಾಡವಳ್ಳಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts