More

    ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಹೊಸ ತಿರುವು: ಅಜ್ಞಾತ ಸ್ಥಳದಲ್ಲಿ ವಿಡಿಯೋ ಮಾಡಿ ಸ್ಪಷ್ಟನೆ ನೀಡಿದ ಪ್ರಜ್ವಲ್ ಮಾಜಿ ಕಾರು ಚಾಲಕ

    ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಅಜ್ಞಾತ ಸ್ಥಳದಲ್ಲಿ ವಿಡಿಯೋ ಮಾಡಿ ಕೆಲವೊಂದು ಸ್ಪಷ್ಟನೆ ನೀಡಿದ್ದಾರೆ.

    ನಾನು ಹದಿನೈದು ವರ್ಷದಿಂದ ಪ್ರಜ್ವಲ್ ರೇವಣ್ಣ ಹಾಗೂ ಅವರ ಕುಟುಂಬದ ಕಾರು ಚಾಲಕನಾಗಿ ಕೆಲಸ ಮಾಡಿದ್ದೀನಿ. ಒಂದು ವರ್ಷದಿಂದ ಕೆಲಸ ಬಿಟ್ಟಿದ್ದೀನಿ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದ್ದರು. ಹಿಂಸೆ ಕೊಟ್ಟರು, ಆದ್ದರಿಂದ ಅವರ ಮನೆಯಿಂದ ಹೊರಬಂದೆ ಎಂದು ತಿಳಿಸಿದ್ದಾರೆ.

    ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ರೇವಣ್ಣ ಕುಟುಂಬದ ವಿರುದ್ಧ ಹೋರಾಟ ಮಾಡುತ್ತಿದ್ದರು. ಯಾರಿಂದಲೂ ನ್ಯಾಯ ಸಿಗಲ್ಲ ಎಂದು ದೇವರಾಜೇಗೌಡ ಅವರ ಬಳಿ ಹೋದೆ. ನಿನಗೆ ನ್ಯಾಯ ದೊರಕಿಸಿ ಕೊಡುವಂತಹ ಕೆಲಸ ಮಾಡುತ್ತೇನೆ ಎಂದು ಹೇಳಿದರು. ನಂತರ ಯಾವುದೇ ಅಶ್ಲೀಲ ವಿಡಿಯೋ ರಿಲೀಸ್ ಮಾಡಬಾರದು ಎಂದು ನನ್ನ ವಿರುದ್ದ ಪ್ರಜ್ವಲ್ ರೇವಣ್ಣ ಸ್ಟೇ ತರುತ್ತಾರೆ ಎಂದು ಹೇಳಿದ್ದಾರೆ.

    ನಿನ್ನ ಬಳಿ ಇರುವ ವಿಡಿಯೋ, ಫೋಟೋಗಳನ್ನು, ನಾನು ಯಾರಿಗೂ ತೋರಿಸಲ್ಲ ಕೊಡು ಎಂದು ದೇವರಾಜೇಗೌಡ ಕೇಳಿದ್ದರು. ಅದನ್ನು ನಾನು ನಂಬಿ ನನ್ನ ಬಳಿಯಿದ್ದ ವಿಡಿಯೋದ ಒಂದು ಕಾಪಿ ಅವರಿಗೆ ಕೊಟ್ಟೆ. ಅವರು ಅದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಗೊತ್ತಿಲ್ಲ. ದೇವರಾಜೆಗೌಡರನ್ನು ಬಿಟ್ಟರೆ ಬೇರೆ ಯಾರಿಗೂ ನಾನು ಕಾಪಿ ಕೊಟ್ಟಿಲ್ಲ. ಕಾಂಗ್ರೆಸ್‌ನವರಿಗಂತು ನಾನು ವಿಡಿಯೋ ಕೊಟ್ಟಿಲ್ಲ. ಕಾಂಗ್ರೆಸ್ ಅವರ ಮೇಲೆ ನಂಬಿಕೆ ಇಲ್ಲದೆ ದೇವರಾಜೇಗೌಡರ ಹತ್ತಿರ ಕೊಟ್ಟಿದ್ದೆ. ಪೆನ್ ಡ್ರೈವ್ ಯಾರು ಹಂಚಿದರೂ ನನಗೆ ಗೊತ್ತಿಲ್ಲ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

    ನಾನು ಕಾಂಗ್ರೆಸ್ ಅವರಿಗೆ ಕೊಡುವುದಿದ್ದರೆ ದೇವರಾಜೇಗೌಡ ಬಳಿ ಏಕೆ ಹೋಗುತ್ತಿದೆ. ಎಸ್‌ಐಟಿ ಮುಂದೆ ಹಾಜರಾಗಿ ಎಲ್ಲಾ ಹೇಳಿ ಕೊಳ್ಳುತ್ತೇನೆ. ನಂತರ ಮಾಧ್ಯಮದ ಮುಂದೆ ಎಲ್ಲಾ ವಿವರವಾಗಿ ಹೇಳುತ್ತೇನೆ. ಕಾಂಗ್ರೆಸ್‌ನವರ ಹೆಸರನ್ನು ಬೆರೆಸಬೇಡಿ. ದೇವೇಗೌಡರನ್ನು ಬಿಟ್ಟರೆ ಯಾರಿಗೂ ಒಂದು ತುಣುಕು ಕೊಟ್ಟಿಲ್ಲ. ಇವತ್ತು ಎಸ್‌ಐಟಿ ಮುಂದೆ ಹಾಜರಾಗಿ ಕೂಲಂಕಷವಾಗಿ ಹೇಳುತ್ತೇನೆ. ರೇವಣ್ಣ ಮನೆಯಲ್ಲಿ ಏನೆಲ್ಲಾ ನಡೆದಿದೆ ನಾನು ನೋಡಿದ್ದೇನೆ. ಎಲ್ಲವನ್ನೂ ಎಸ್‌ಐಟಿ ಮುಂದೆ ಹೇಳುತ್ತೇನೆ. ಯಾರಿಗೆ ಅನ್ಯಾಯವಾಗಿದೆ ಅವರು ಧೈರ್ಯವಾಗಿ ಮುಂದೆ ಬನ್ನಿ ಎಂದು ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ.

    18 ಮಂದಿ ಅಧಿಕಾರಿ-ಸಿಬ್ಬಂದಿ ನೇಮಕ:
    ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡಕ್ಕೆ ಹೆಚ್ಚುವರಿಯಾಗಿ ೧೮ ಮಂದಿ ಅಧಿಕಾರಿ-ಸಿಬ್ಬಂದಿ ನೇಮಕ ಮಾಡಲಾಗಿದೆ.
    ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಶಾಸಕ ಎಚ್.ಡಿ.ರೇವಣ್ಣ ಹಾಗೂ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಈಗಾಗಲೇ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ , ಮೈಸೂರು ಎಸ್ಪಿ ಸೀಮಾ ಲಾಟ್ಕರ್, ಸುಮನ್ ಡಿ. ಪೆನ್ನೇಕರ್ ನೇತೃತ್ವದ ತಂಡ ತನಿಖೆ ಆರಂಭಿಸಿದೆ. ಈ ತಂಡಕ್ಕೆ ಹೆಚ್ಚುವರಿಯಾಗಿ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ ಮೂವರು ಎಸಿಪಿ ಸೇರಿ ೧೯ ಮಂದಿ ಅಧಿಕಾರಿ ಸಿಬ್ಬಂದಿ ನೇಮಿಸಲಾಗಿದೆ.

    ವರದಿ ಕೇಳಿದ ರಾಷ್ಟ್ರೀಯ ಮಹಿಳಾ ಆಯೋಗ:
    ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಮತ್ತೊಂದೆಡೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್‌ಗೆ ಪತ್ರ ಬರೆದು ಮೂರು ದಿನಗಳ ಒಳಗೆ ಸಮಗ್ರ ವರದಿ ನೀಡುವಂತೆ ಸೂಚಿಸಿದೆ.
    ಸಂಸದ ಪ್ರಜ್ವಲ್ ರೇವಣ್ಣಗೆ ಸೇರಿದ ಅಶ್ಲೀಲ ವಿಡಿಯೋಗಳು ಸಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಅದನ್ನು ಗಮನಿಸಿರುವ ಆಯೋಗ, ಪ್ರಕರಣ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ ಎಂದು ಆಯೋಗ ಹೇಳಿದೆ.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts