ಉಸಿರಾಟದ ಸಮಸ್ಯೆಗೆ ಚಿಕಿತ್ಸೆ ಸಿಗದೆ ನಾನ್​ ಕೋವಿಡ್ ರೋಗಿ ಸಾವು!

covidddd
Published on

ಬೆಂಗಳೂರು: ಕರೊನಾ ಪಾಸಿಟಿವ್ ಇರದಿದ್ದರೂ ಉಸಿರಾಟದ ಸಮಸ್ಯೆಯಿಂದ ವ್ಯಕ್ತಿಯೊಬ್ಬ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿ ಕೊನೆಗೆ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ಮಂಗಳವಾರ ನಡೆದಿದೆ.

ಇಲ್ಲಿನ ಕಮಲಾನಗರದ ಮಾರುಕಟ್ಟೆ ಬಳಿ ಮಂಗಳವಾರ ಬೆಳಗ್ಗೆ 40 ವರ್ಷದ ವ್ಯಕ್ತಿ ತೀವ್ರ ಉಸಿರಾಟ ತೊಂದರೆಯಿಂದ ಬೆಳಿಗ್ಗೆ ಅಸ್ವಸ್ಥರಾಗಿ ಬಿದ್ದಿದ್ದರು.

ಅವರನ್ನು ಸ್ಥಳೀಯ ಸಾರ್ವಜನಿಕರು ಮತ್ತು ಮಾಜಿ ಕಾರ್ಪೊರೇಟರ್ ಎಂ.ಶಿವರಾಜು ಅವರು ಆಂಬುಲೆನ್ಸ್ ಗೆ ಕರೆ ಮಾಡಿ ಮಲ್ಲೇಶ್ವರದ ಕೆಸಿ ಜನರಲ್ ಆಸ್ಪತ್ರೆಗೆ ವರ್ಗಾಯಿಸಿದ್ದರು.

ಆದರೆ, ಇಲ್ಲಿ ಹಾಸಿಗೆ ಲಭ್ಯವಿಲ್ಲದ ಹಿನ್ನೆಲೆಯಲ್ಲಿ, ವಿಕ್ಟೋರಿಯ ಆಸ್ಪತ್ರೆ ಮತ್ತು ಅಂತಿಮವಾಗಿ ಜಯದೇವ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲಾಯಿತು. ವ್ಯಕ್ತಿಯ ಪರಿಸ್ಥಿತಿ ಗಂಭೀರತೆ ತಲುಪಿದ್ದರಿಂದ ಚಿಕೆತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಮಾಜಿ ಪಾಲಿಕೆ ಸದಸ್ಯರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net