ರಾಜ್ಯದಲ್ಲಿ ನಡೆಯುತ್ತಿರುವ ಭಾರತ್​ ಜೋಡೋ ಯಾತ್ರೆಗೆ ಅ.18ಕ್ಕೆ ಒಂದು ದಿನದ ವಿರಾಮ... ಮರುದಿನ ಶುರು

bharat jodo yatre tumkur rahul gandhi
Published on

ಬೆಂಗಳೂರು: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ನೇತೃತ್ವದಲ್ಲಿ ಕರ್ನಾಟದಲ್ಲಿ ನಡೆಯುತ್ತಿರುವ ಭಾರತ್​ ಜೋಡೋ ಯಾತ್ರೆಗೆ ಅ.17ರಂದು ವಿರಾಮ ಇರಲಿದೆ. ಅಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಆ ದಿನ ಯಾತ್ರೆ ನಡೆಯುವುದಿಲ್ಲ. ಮರುದಿನ ಯಾತ್ರೆ ಮುಂದುವರಿಯಲಿದೆ.

ಯಾತ್ರೆಯಲ್ಲಿ ಪಾಲ್ಗೊಂಡಿರುವ ರಾಹುಲ್ ಗಾಂಧಿ ಸೇರಿದಂತೆ ಪ್ರದೇಶ ಕಾಂಗ್ರೆಸ್ ಕಮಿಟಿಯ ಸುಮಾರು 40 ಪದಾಧಿಕಾರಿಗಳಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಅವರಿರುವ ಕ್ಯಾಂಪ್​ ಸ್ಥಳದಲ್ಲೇ ಪೋಲಿಂಗ್ ಬೂತ್ ಸ್ಥಾಪಿಸಲಾಗುತ್ತೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಸೆ.22ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅ.18ರಂದು ಮತದಾನ ನಡೆಯಲಿದ್ದು, ಅ.19ರಂದು ಫಲಿತಾಂಶ ಪ್ರಕಟವಾಗಲಿದೆ.

2022ರ ಸೆಪ್ಟೆಂಬರ್​ 7ರಂದು ಕನ್ಯಾಕುಮಾರಿಯಿಂದ ಶುರುವಾಗಿರುವ ರಾಹುಲ್​ ಗಾಂಧಿ ನೇತೃತ್ವದ ಭಾರತ್​ ಜೋಡೋ ಯಾತ್ರೆ, ಸೆ.30ರಂದು ತಮಿಳುನಾಡಿನಿಂದ ಗುಂಡ್ಲುಪೇಟೆ ಮೂಲಕ ಕರ್ನಾಟಕವನ್ನು ಪ್ರವೇಶಿಸಿದೆ. ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ಯಶಸ್ವಿಯಾಗಿ ಯಾತ್ರೆ ನಡೆಸಿರುವ ರಾಹುಲ್, ಇಂದು(ಅ.8) ತುಮಕೂರು ಜಿಲ್ಲೆ ಪ್ರವೇಶಿಸಿದ್ದಾರೆ. ಈ ಯಾತ್ರೆ ಕಾಶ್ಮೀರದಲ್ಲಿ ಕೊನೆಯಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net