More

    ಗುಡ್​ ನ್ಯೂಸ್: ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅಧಿಕೃತ ಆದೇಶ! ಈ ಎಲ್ಲ ಒಳಪಂಗಡಕ್ಕೂ ನೆರವು

    ಬೆಂಗಳೂರು: ರಾಜ್ಯದ ಒಕ್ಕಲಿಗ ಸಮುದಾಯಕ್ಕೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ ಕೊಟ್ಟಿದ್ದಾರೆ. ನಿನ್ನೆ(ಶನಿವಾರ) ದೆಹಲಿಯಿಂದ ಬೆಂಗಳೂರಿಗೆ ಸಿಎಂ ಬರುತ್ತಿದ್ದಂತೆ ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಅಧಿಕೃತ ಆದೇಶ ಹೊರಡಿಸಿದರು. ಅಲ್ಲದೆ ನಿಗಮದ ಕಾರ್ಯಚಟುವಟಿಕೆಗಳಿಗೆ 500 ಕೋಟಿ ರೂಪಾಯಿ ಅನುದಾನವನ್ನೂ ಕೊಟ್ಟಿದ್ದಾರೆ.

    ಒಕ್ಕಲಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಹೊಸ ನಿಗಮ ಸ್ಥಾಪಿಸುವುದಾಗಿ ಪ್ರಸಕ್ತ ಸಾಲಿನ ಬಜೆಟ್​ನಲ್ಲಿ ಯಡಿಯೂರಪ್ಪ ನೀಡಿದ್ದ ಭರವಸೆ ಕಾರ್ಯರೂಪಕ್ಕೆ ಬಂದಿದೆ. ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ 3(ಎ)ನಲ್ಲಿ ನಮೂದಾಗಿರುವ ಒಕ್ಕಲಿಗ ಸಮುದಾಯದ ಒಳಪಂಗಡಗಳಿಗೆ ಈ ನಿಗಮ ನೆರವಾಗಲಿದೆ.

    ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ/ಗೌಡ, ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರೆಡ್ಡಿ, ಗೌಂಡರ್, ನಾಮಧಾರಿ ಗೌಡ, ಉಪ್ಪಿನ ಕೊಳಗ/ ಉತ್ತಮ ಕೊಳಗ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿ ನಿಗಮ ಸ್ಥಾಪನೆಯ ಉದ್ದೇಶ.

    ಕಂಪನಿ ಕಾಯ್ದೆ 2013ರಡಿ ನೋಂದಾಯಿಸಿ ಒಕ್ಕಲಿಗರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೂಚಿಸಿದ್ದು, ನಿಗಮಕ್ಕೆ ಪೂರಕ ಹುದ್ದೆಗಳ ಸೃಜನೆ ಕುರಿತು ಪ್ರತ್ಯೇಕ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದೆ.

    ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ ಸಂದರ್ಭದಲ್ಲೇ ಒಕ್ಕಲಿಗರ ಅಭಿವೃದ್ಧಿ ನಿಮಗ ಸ್ಥಾಪಿಸುವಂತೆ ಬಿಜೆಪಿ ಪಕ್ಷದ ಕೆಲ ನಾಯಕರೂ ಸೇರಿದಂತೆ ಅನೇಕ ಒಕ್ಕಲಿಗ ನಾಯಕರು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಈಗ ಅಂತಿಮವಾಗಿ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ರಾಮನಗರ ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಪ್ರಭಾವ ಎಷ್ಟರ ಮಟ್ಟಿಗೆ ಬೀರಲಿದೆ ಎಂಬುದನ್ನು ಕಾದುನೋಡಬೇಕು.

    ಆ ಪ್ರಾಪರ್ಟಿ ದೊಡ್ಡಮನೆಯವರದ್ದು, ಹಾಗಾಗಿ ದರ್ಶನ್​ಗೆ ಆಸ್ತಿ ಕೊಡಲ್ಲ ಅಂದೆ…

    ಅರುಣಾಕುಮಾರಿಯ ಪ್ರೇಮ್​ಕಹಾನಿ ಬಿಚ್ಚಿಟ್ಟ ನಟ ದರ್ಶನ್​! 9 ವರ್ಷ ಚಿಕ್ಕವನೊಂದಿಗೆ ಲವ್ವಿಡವ್ವಿ ಶುರು ಮಾಡಿದ್ದಳಂತೆ…

    ಪಿಎಸ್​ಐ ಆಗಿರುವ ತಾಯಿ ವಿರುದ್ಧವೇ ಗದಗ ಎಸ್​ಪಿಗೆ ದೂರು ಕೊಟ್ಟ ಯುವತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts