More

    ಚಾಮರಾಜನಗರದಲ್ಲಿ 24 ಮಂದಿ ಸಾವು: ರೋಹಿಣಿ ಸಿಂಧೂರಿ ವಿರುದ್ಧ ಸಿಎಂ ಯಡಿಯೂರಪ್ಪ ಗರಂ

    ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯ ಕೋವಿಡ್​ ವಾರ್ಡ್​ನಲ್ಲಿ ಆಮ್ಲಜನಕ ಕೊರತೆಯಿಂದಾಗಿ 20ಕ್ಕೂ ಹೆಚ್ಚು ಮಂದಿ ಸತ್ತಿದ್ದಾರೆ ಎನ್ನಲಾದ ಸಾವಿನ ಪ್ರಕರಣ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಫೋನ್ ಮೂಲಕ ಚಾಮರಾಜನಗರ ಜಿಲ್ಲಾಧಿಕಾರಿ ಬಳಿ ಮಾಹಿತಿ ಪಡೆದಿದ್ದಾರೆ.

    ಈ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿಎಂ, ಸೂಕ್ತ ಕ್ರಮವಹಿಸಲು ಸೂಚನೆ ನೀಡಿದ್ದಾರೆ. ಇದೇ ವೇಳೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧವೂ ಗರಂ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

    20ಕ್ಕೂ ಹೆಚ್ಚು ಮಂದಿಯ ಸಾವಿನ ಕುರಿತು ಪ್ರತಿಕ್ರಿಯಿಸಿರುವ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್, ವಸ್ತುಸ್ಥಿತಿ ವರದಿ ಸಲ್ಲಿಸಲು ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದೆ. ಲೋಪದೋಷಗಳಿಗೆ ಹೊಣೆಗಾರರಾದವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ. 24 ಜನರ ಸಾವು ಆಮ್ಲಜನಕದ ಕೊರತೆಯಿಂದಲ್ಲ, ಬೇರೆ ಬೇರೆ ಕಾರಣಗಳಿವೆ ಎಂದು ಸಮಜಾಯಿಷಿ ನೀಡಿದ್ದಾರೆ. ಮೈಸೂರಿನಲ್ಲೂ ಆಮ್ಲಜನಕದ ಕೊರತೆಯಿದೆ. ಜಿಲ್ಲಾಡಳಿತಗಳ ಮಧ್ಯೆ ಸಮನ್ವಯ, ಸಂವಹನದ ಕೊರತೆ ಮತ್ತೆ ಇನ್ನೇನಿದೆಯೋ ವರದಿ ಬಂದ ನಂತರ ತಿಳಿಯಲಿದೆ ಸುರೇಶ್ ಕುಮಾರ್ ಹೇಳಿದ್ದಾರೆ.

    ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು ಸ್ಪಷ್ಟ ಮಾಹಿತಿ ಪಡೆದು ನಂತರವಷ್ಟೇ ಚಾಮರಾಜನಗರದಲ್ಲಿನ ಸಾವಿನ ಪ್ರಕರಣ ಕುರಿತು ಪ್ರತಿಕ್ರಿಯಿಸುವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

    ಇದಕ್ಕೂ ಮುನ್ನಾ ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಮೈಸೂರು ಜಿಲ್ಲಾಡಳಿತ, ನಿನ್ನೆ ರಾತ್ರಿ 12.30ರವರೆಗೂ ಮೈಸೂರಿನಿಂದ ಚಾಮರಾಜನಗರಕ್ಕೆ ಒಟ್ಟು‌ 250 ಆಕ್ಸಿಜನ್ ಸಿಲಿಂಡರ್ ಅನ್ನು ಕಳುಹಿಸಲಾಗಿದೆ. ಆಕ್ಸಿಜನ್ ಲಿಕ್ವಿಡ್ ಬಳ್ಳಾರಿಯಿಂದ ಚಾಮರಾಜನಗರಕ್ಕೆ ಬರಬೇಕಿತ್ತು. ಅದು ಸರಿಯಾದ ಸಮಯದಲ್ಲಿ ಬಂದಿದೆಯೋ ಇಲ್ಲವೋ ಗೊತ್ತಿಲ್ಲ. ಚಾಮರಾಜನಗರದವರ ಬೇಡಿಕೆಯಂತೆ ಮಾನವೀಯ ದೃಷ್ಟಿಯಿಂದ ಆಕ್ಸಿಜನ್ ಸಿಲಿಂಡರ್ ಕಳುಹಿಸಲಾಗಿದೆ. ಈ ವಿಚಾರದಲ್ಲಿ ಮೈಸೂರು ಜಿಲ್ಲಾಡಳಿತ ವಿಳಂಬ ಮಾಡಿಲ್ಲ. ನಾವು ಅಧಿಕೃತವಾಗಿ 250 ಆಕ್ಸಿಜನ್ ಸಿಲಿಂಡರ್ ಅನ್ನು ನಿನ್ನೆ ಮಧ್ಯರಾತ್ರಿಯ ವೇಳೆಗೆ ಕಳಿಸಿದ್ದೇವೆ. ಇದಕ್ಕೆ ದಾಖಲೆ ಇದೆ ಎಂದು ಸ್ಪಷ್ಟಪಡಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts