ಭಟ್ಕಳದಲ್ಲಿ 8 ವರ್ಷದಿಂದ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಮಹಿಳೆ ಬಂಧನ!

bhatkala
Published on

ಕಾರವಾರ: ಎಂಟು ವರ್ಷದಿಂದ ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.

ಖತೀಜಾ ಜಾವೇದ್ ಎಂಬಾಕೆ ಅಕ್ರಮವಾಗಿ ಉತ್ತರಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ವಾಸವಿದ್ದಳು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 8 ವರ್ಷದ ಹಿಂದೆ ಭಟ್ಕಳ ಮೂಲದ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್‌ ಎಂಬುವವರನ್ನು ಖತೀಜಾ ದುಬೈನಲ್ಲಿ ವಿವಾಹವಾಗಿದ್ದಳು. ಇದನ್ನೂ ಓದಿರಿ ಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ

ಖತೀಜಾ 2014ರಲ್ಲಿ ಪ್ರವಾಸಿ ವೀಸಾ ಪಡೆದು 3 ತಿಂಗಳು ಭಾರತದಲ್ಲಿದ್ದು ವಾಪಸ್​ ಹೋಗಿದ್ದಳು. ಮತ್ತೆ ಕಳ್ಳಮಾರ್ಗದ ಮೂಲಕ ಭಾರತ ಪ್ರವೇಶಿದ್ದ ಖತೀಜಾ, 8 ವರ್ಷಗಳಿಂದ 3 ಮಕ್ಕಳೊಂದಿಗೆ ಭಟ್ಕಳದಲ್ಲೇ ವಾಸವಿದ್ದಳು. ಸುಳ್ಳು ದಾಖಲೆ ನೀಡಿ ವೋಟರ್ ಐಡಿ, ರೇಷನ್ ಕಾರ್ಡ್, ಜನ್ಮದಾಖಲೆ ಪಡೆದಿರುವುದು ಬೆಳಕಿಗೆ ಬಂದಿದೆ. ಐಪಿಸಿ ಸೆಕ್ಷನ್ 468, 471 ಅಡಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net