ಬೈಕ್ ಡಿಕ್ಕಿಯಾಗಿ ವೃದ್ಧ ದುರ್ಮರಣ


ವಿಜಯವಾಣಿ ಸುದ್ದಿಜಾಲ ಚನ್ನರಾಯಪಟ್ಟಣ
ತಾಲೂಕಿನ ಹಿರೀಸಾವೆಯ ಶ್ರೀ ಬಸವೇಶ್ವರ ವೃತ್ತದ ಬಳಿ ಅಪರಿಚಿತ ಬೈಕ್ ಡಿಕ್ಕಿಯಾದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ.
ಹಿರೀಸಾವೆ ಹೋಬಳಿಯ ಯಾಳನಹಳ್ಳಿ ಗ್ರಾಮದ ನಿವಾಸಿ ಬೊಮ್ಮರಾಜಯ್ಯ(73) ಮೃತ ವ್ಯಕ್ತಿ. ಬುಧವಾರ ಖಾಸಗಿ ಕಲ್ಯಾಣಮಂಟಪದಲ್ಲಿ ಮದುವೆ ಮುಗಿಸಿಕೊಂಡು ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆ ಬದಿಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಬೊಮ್ಮರಾಜಯ್ಯ ಅವರನ್ನು ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *