ಶಿವಮೊಗ್ಗ: ನೈಋತ್ಯ ಶಿಕ್ಷಕರ ಕ್ಷೇತ್ರ ರಚನೆಯಾದ ಬಳಿಕ ರಾಜಕಾರಣಿಗಳು, ಶಿಕ್ಷಕರಲ್ಲದವರು, ಪದವಿಯನ್ನೇ ಪಡೆಯದವರು ಕೆಲ ಸಂದರ್ಭದಲ್ಲಿ ಚುನಾಯಿತರಾಗುತ್ತಿರುವುದು ವಿಪರ್ಯಾಸ ಎಂದು ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಡಾ.ನರೇಶ್ಚಂದ್ ಹೆಗ್ಡೆ ಹೇಳಿದರು.
ಈ ಕ್ಷೇತ್ರಕ್ಕೆ ಓರ್ವ ವಿದ್ಯಾವಂತ ಮತ್ತು ಶಿಕ್ಷಕನೇ ಆಗಿರುವ ವ್ಯಕ್ತಿ ಪ್ರತಿನಿಧಿಯಾಗಬೇಕು ಎಂಬ ಪರಿಕಲ್ಪನೆಯಡಿ ಹೃದಯ ಶಸ್ತ್ರಚಿಕಿತ್ಸಾ ತಜ್ಞ ಮತ್ತು ಮೆಡಿಕಲ್ ಕಾಲೇಜಿನಲ್ಲಿ ಪ್ರಾಧ್ಯಾಪಕನಾಗಿರುವ ನಾನು ಸ್ಪರ್ಧಿಸಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಾಥಮಿಕ ಶಾಲಾ ಹಂತದಿಂದ ವೃತ್ತಿ ಶಿಕ್ಷಣ ಕಾಲೇಜುಗಳವರೆಗಿನ ವಿವಿಧ ಹಂತಗಳ ಶೈಕ್ಷಣಿಕ ಸಂಸ್ಥೆಗಳ, ಭಾಷಾ ಮಾಧ್ಯಮದ, ಬೋಧಕ ವೃಂದದ, ಬೋಧಕೇತರರ, ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ವಿದ್ಯಾಸಂಸ್ಥೆಗಳ, ಆಡಳಿತ ಮಂಡಳಿಗಳವರ ಬಹುಮುಖಿ ಸಮಸ್ಯೆಗಳನ್ನು ಆಯಾ ವರ್ಗದಲ್ಲಿ ತಜ್ಞರೆನಿಸಿದವರಿಂದ ಸಲಹೆ, ಮಾರ್ಗದರ್ಶನ ಪಡೆದು ಶಾಶ್ವತ ಪರಿಹಾರ ರೂಪಿಸಲು ನಾನು ಬದ್ಧನಾಗಿದ್ದೇನೆಂದರು.
ಸ್ತ್ರೀರೋಗ ತಜ್ಞೆ ಡಾ. ಅಮಿತಾ ಹೆಗಡೆ, ಕ್ರೀಡಾಪಟು ಶಶಿ ಸುದ್ದಿಗೋಷ್ಠಿಯಲ್ಲಿದ್ದರು.