More

    ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆ ಅನಿವಾರ್ಯ: ಎನ್​. ರವಿಕುಮಾರ್​ ಸಮರ್ಥನೆ

    ಬೆಂಗಳೂರು: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆ, ಜನಪರ ಯೋಜನೆಗಳ ವೆಚ್ಚ ಸರಿದೂಗಿಸಲು ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆ ಅನಿವಾರ್ಯ. ಹೀಗಾಗಿ ಸುಂಕ ದರ ಇಳಿಸುವಂತೆ ಒತ್ತಾಯಿಸಲಾಗದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಸಮರ್ಥಿಸಿಕೊಂಡರು.

    ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರವಿಕುಮಾರ್​, ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆ ಹೊಸದಲ್ಲ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆಯಾಗಿತ್ತು ಎಂದು ಉದಾಹರಿಸಿದರು.

    ಕೇಂದ್ರ ಸರ್ಕಾರ ಕಳೆದ ಏಳು ವರ್ಷದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದೆ, ಇದರ ಬಗ್ಗೆ ಜನರಿಗೆ ತಿಳಿಸುವ ಕಾರ್ಯಕ್ರಮ ಯೋಜನೆ ಆಗಿದೆ. ಪೆಟ್ರೋಲ್ ಡೀಸಲ್ ಬೆಲೆ ಹೆಚ್ಚಳ ಆಗುರುವ ಬಗ್ಗೆ ಕೆಲವರು ಹೇಳುತ್ತಿದ್ದಾರೆಯೇ ಹೊರತು ರೈತರು ಮತ್ತು ಬಡವರಿಗೆ ಸಿಗುತ್ತಿರುವ ಸೌಲಭ್ಯದ ಬಗ್ಗೆ ಯಾರೂ ಹೇಳುತ್ತಿಲ್ಲ. ಇಂಧನ ಬೆಲೆ ಏರಿಕೆ ಅನಿವಾರ್ಯದ ಪರಿಸ್ಥಿತಿಯಲ್ಲಿ ಆಗಿದೆ ಎಂದು ರವಿಕುಮಾರ್​ ಸಮರ್ಥಿಸಿಕೊಂಡರು.

    ಶ್ಯಾಮ್ ಪ್ರಕಾಶ್ ಮುಖರ್ಜಿ ಬಲಿದಾನ ದಿನ: ಶ್ಯಾಮ್ ಪ್ರಕಾಶ್ ಮುಖರ್ಜಿ ಬಲಿದಾನ ದಿನವಾದ ಜೂ.23ರಂದು ರಾಜ್ಯದಲ್ಲಿ 300 ಚಿಂತನ-ಮಂತನ ಕಾರ್ಯಕ್ರಮ ನಡೆಸಲಾಗುವುದು. ಒಟ್ಟು 58 ಸಾವಿರ ಬೂತ್​ಗಳಲ್ಲಿ ಗಿಡ ನೆಡುವ ಕಾರ್ಯ ಹಾಗೂ ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಪ್ರತಿ ಮನೆ ಮನೆಗಳಲ್ಲಿ ಕೇಳಿಸುವ ಯೋಜನೆ ರೂಪಿಸಲಾಗಿದೆ ಎಂದು ರವಿಕುಮಾರ್ ಹೇಳಿದರು.

    ರಾಜ್ಯದಲ್ಲಿರುವ 1.25 ಕೋಟಿ ಕುಟುಂಬದ ಬಳಿ ಹೋಗಿ ಲಸಿಕೆ ಅಭಿಯಾನ ಮಾಡ್ತೇವೆ. ಲಸಿಕೆ ತೆಗೆದುಕೊಂಡಿರುವ ಬಗ್ಗೆ ಮಾಹಿತಿ ಪಡೆಯುತ್ತೇವೆ. ರಾಜ್ಯ ಕಾರ್ಯಕಾರಿಣಿ ಸಭೆ ಜೂ.26ರಂದು ನಿಗದಿಯಾಗಿದ್ದು, ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ವರ್ಚುವಲ್ ಮೂಲಕ ಭಾಗಿಯಾಗಲಿದ್ದಾರೆ. 25ರಂದು ಬಿಜೆಪಿ ಕಚೇರಿಯಲ್ಲಿ ಪದಾಧಿಕಾರಿಗಳ ಸಭೆ ಇದೆ, ಈ ಸಭೆ ಆಫ್ ಲೈನ್ ಮೂಲಕ ನಡೆಯುತ್ತದೆ ಎಂದರು.

    ಮಗು ಹುಟ್ಟಿದ ಮೂರೇ ದಿನಕ್ಕೆ ರೈಲಿಗೆ ತಲೆ ಕೊಟ್ಟ ಗಂಡ! ಪತ್ನಿಯ ಆ ನಿರ್ಧಾರವೇ ಇಷ್ಟಕ್ಕೆಲ್ಲ ಕಾರಣ

    ಮೂತ್ರ ವಿಸರ್ಜನೆ ಮಾಡುತ್ತಲೇ ಯುವಕರಿಬ್ಬರು ದುರಂತ ಸಾವು! ದೇವರೇ ಈ ಸಾವು ನ್ಯಾಯವೇ…

    ತಡರಾತ್ರಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಆತ್ಮಹತ್ಯೆ! ಮುದ್ದಾದ ಯುವತಿ ಬಾಳಿಗೆ ಕೊಳ್ಳಿ ಇಟ್ಟಿದ್ಯಾರು?

    ಪೊಲೀಸರ ಕಿರುಕುಳ ಸಹಿಸಲಾಗ್ತಿಲ್ಲ, ನನಗೆ ದಯಾಮರಣ ಕೊಡಿ: ಮಧುಗಿರಿಮೋದಿ

    ಸತ್ತು ಮಲಗಿದ್ದವ ಕರುಳ ಕೂಗಿಗೆ ಓಗೊಟ್ಟು ಮತ್ತೆ ಬದುಕಿದ! ಅಂತ್ಯಸಂಸ್ಕಾರ ವೇಳೆ ನಡೆದ ಪವಾಡ ಕೇಳಿದ್ರೆ ಶಾಕ್​ ಆಗ್ತೀರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts