More

    ನೀರೆಂದು ಪೆಟ್ರೋಲ್​ ಕುಡಿದ ಅಜ್ಜಿ ಸಾವು

    ಉಪ್ಪಿನಂಗಡಿ(ದ.ಕ.): ಬಾಟಲಿಯಲ್ಲಿದ್ದ ಪೆಟ್ರೋಲ್​ ಅನ್ನು ನೀರೆಂದು ಕುಡಿದ ಅಜ್ಜಿ ಮೃತಪಟ್ಟ ಘಟನೆ ಪೆರ್ನೆ ಸಂಪದಕೋಡಿಯಲ್ಲಿ ಬುಧವಾರ ಸಂಭವಿಸಿದೆ.

    ಬಂಟ್ವಾಳದ ಪದ್ಮಾವತಿ (79) ಮೃತರು. ಸೆ.26ರಂದು ಪೆರ್ನೆಯ ಮಗಳ ಮನೆಗೆ ಪದ್ಮಾವತಿ ಬಂದಿದ್ದರು. ಹುಲ್ಲು ಕತ್ತರಿಸುವ ಯಂತ್ರಕ್ಕೆಂದು ಮನೆಯವರು ಬಾಟಲಿಯಲ್ಲಿ ಪೆಟ್ರೋಲ್​ ತಂದಿಟ್ಟಿದ್ದರು.

    ದೃಷ್ಟಿದೋಷದಿಂದ ಬಳಲುತ್ತಿದ್ದ ಅಜ್ಜಿ, ಪೆಟ್ರೋಲ್​ ಇದ್ದ ಬಾಟಲಿಯನ್ನ ನೀರೆಂದು ಭಾವಿಸಿ ಕುಡಿದಿದ್ದರು. ಅಸ್ವಸ್ಥರಾಗಿದ್ದ ಅವರನ್ನು ಮಂಗಳೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಬುಧವಾರ ಕೊನೆಯುಸಿರೆಳೆದರು. ಉಪ್ಪಿನಂಗಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಲಕ್ಷ್ಮೀ ಹೆಬ್ಬಾಳ್ಕರ್​ಗೆ ರಾತ್ರಿ ರಾಜಕೀಯ ಚೆನ್ನಾಗಿ ಗೊತ್ತು: ಬಿಜೆಪಿ ಮಾಜಿ ಶಾಸಕರ ವಿವಾದಾತ್ಮಕ ಹೇಳಿಕೆ

    ವಿಕೃತಕಾಮಿ ಉಮೇಶ್​ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ: 22 ವರ್ಷ ಹಿಂದಿನ ಕೇಸ್​ ಹಿಸ್ಟರಿ ಇಲ್ಲಿದೆ

    ಗಂಡಂದಿರನ್ನ ಕಳ್ಕೊಂಡು ತವರಿಗೆ ಬಂದ ಮಗಳ ಕಣ್ಣಿಗೆ ಬಿತ್ತು ತಾಯಿ-ದೊಡ್ಡಪ್ಪನ ಲವ್ವಿಡವ್ವಿ… ಮುಂದಾಗಿದ್ದು ದುರಂತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts