More

    ಮೇಕೆದಾಟು ಪಾದಯಾತ್ರೆ ತಡೆಗೆ ಪಿಐಎಲ್​: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ಹಿಗ್ಗಾಮುಗ್ಗಾ ತರಾಟೆ

    ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕೆಪಿಸಿಸಿ ಹಮ್ಮಿಕೊಂಡಿರುವ ಪಾದಯಾತ್ರೆ ತಡೆಯಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​, ಬುಧವಾರ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

    ಕರೊನಾ ಹಿನ್ನೆಲೆ ರಾಜ್ಯದಲ್ಲಿ ಪ್ರತಿಭಟನೆ, ಧರಣಿ, ಮೆರವಣಿಗೆ ಸೇರಿ ಎಲ್ಲ ರೀತಿಯ ಸಾರ್ವಜನಿಕ ಚಟುವಟಿಕೆ ನಿರ್ಬಂಧಿಸಿ ನೀವೇ ಆದೇಶ ಹೊರಡಿಸಿದ್ದೀರಿ. ಪಾದಯಾತ್ರೆಗೆ ಅನುಮತಿ ನಿರಾಕರಿಸಿರುವ ರಾಮನಗರ ಜಿಲ್ಲಾಡಳಿತ, ಪಾದಯಾತ್ರೆ ನಡೆಸದಂತೆ ಸೂಚಿಸಿ ಕೆಪಿಸಿಸಿಗೆ ನೋಟಿಸ್ ನೀಡಿದೆ. ಹೀಗಿದ್ದರೂ ಪಾದಯಾತ್ರೆ ಮುಂದುವರಿಸಲು ಅವಕಾಶ ಮಾಡಿಕೊಟ್ಟಿರುವುದೇಕೆ? ಎಂದು ಸರ್ಕಾರವನ್ನು ಹೈಕೋರ್ಟ್ ಪ್ರಶ್ನಿಸಿದೆ.

    ಪಾದಯಾತ್ರೆ ಆಯೋಜಕರು ಹಾಗೂ ಪಾಲ್ಗೊಂಡವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ, ಪಾದಯಾತ್ರೆ ತಡೆಯಲು ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರ ಅಷ್ಟೊಂದು ಅಸಹಾಯಕವಾಗಿದೆಯೇ? ನಿಯಮಗಳ ಉಲ್ಲಂಘನೆ ಆಗುತ್ತಿದ್ದರೂ ಕ್ರಮ ಜರುಗಿಸದಿರುವಷ್ಟು ಅಸಮರ್ಥವಾಗಿದೆಯೇ? ನೋಟಿಸ್ ನೀಡಿದ ನಂತರವೂ ಪಾದಯಾತ್ರೆ ನಡೆಸುತ್ತಿರುವವ ವಿರುದ್ಧ ಕ್ರಮ ಜರುಗಿಸಲು ವಿಫಲವಾಗಿರುವ ರಾಮನಗರ ಜಿಲ್ಲಾಧಿಕಾರಿಯನ್ನು ವಜಾಗೊಳಿಸಲು ಆದೇಶಿಸಬೇಕಾಗುತ್ತದೆ ಎಂದು ಹೈಕೋರ್ಟ್​ ಎಚ್ಚರಿಸಿದೆ.

    ಕೋವಿಡ್ ಸೋಂಕು ವೇಗವಾಗಿ ಹಬ್ಬುತ್ತಿರುವ ಸಂದರ್ಭದಲ್ಲೂ ಪಾದಯಾತ್ರೆಗೆ ಹೇಗೆ? ಮತ್ತು ಏಕೆ ಅವಕಾಶ ನೀಡಲಾಗಿದೆ? ಅದನ್ನು ತಡೆಯಲು ಯಾವುದೇ ಕ್ರಮ ಕೈಗೊಂಡಿಲ್ಲವೇಕೆ? ಎಂಬ ಬಗ್ಗೆ ಮುಂದಿನ ವಿಚಾರಣೆ ವೇಳೆ ಕೋರ್ಟ್‌ಗೆ ಮಾಹಿತಿ ನೀಡಬೇಕು ಎಂದು ಸರ್ಕಾರಕ್ಕೆ ತಾಕೀತು ಮಾಡಿದೆ. ಪಾದಯಾತ್ರೆ ಆಯೋಜನೆಗೆ ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮತಿ ಪಡೆಯಲಾಗಿದೆಯೇ ಎಂದು ತಿಳಿಸುವಂತೆ ಕೆಪಿಸಿಸಿಗೆ ನಿರ್ದೇಶಿಸಿ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರಕ್ಕೆ ಮುಂದೂಡಿದೆ.

    ಕೋವಿಡ್​ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿ (ಕೆಪಿಸಿಸಿ) ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ತಡೆಹಿಡಿಯಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ತಿಂಡ್ಲು ನಿವಾಸಿ ಎ.ವಿ. ನಾಗೇಂದ್ರ ಪ್ರಸಾದ್​ ಪಿಐಎಲ್​ ಸಲ್ಲಿಸಿದ್ದರು. ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಮತ್ತು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ರಾಮನಗರ ಜಿಲ್ಲಾಧಿಕಾರಿ, ಬಿಬಿಎಂಪಿ ಆಯುಕ್ತರು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಅವರನ್ನು ಪ್ರತಿವಾದಿಯನ್ನಾಗಿಸಲಾಗಿದೆ.

    ನನ್ನ ಬೈಯೋಕ್ಕೆ ಆಗಲ್ಲ, ಟ್ರೋಲ್​ ಮಾಡಿ ಖುಷಿಪಡ್ತಿದ್ದಾರೆ.. ಅವರಿಗೆ ನಾನೇ ಟಾರ್ಗೆಟ್ ಎನ್ನುತ್ತಲೇ ಮಹತ್ತರ ವಿಷ್ಯ ಬಿಚ್ಚಿಟ್ಟ ಡಿಕೆಶಿ

    ಲೈಂಗಿಕತೆಗಾಗಿ ಪತ್ನಿಯರ ವಿನಿಮಯ! ಟೆಲಿಗ್ರಾಂ, ಮೆಸೆಂಜರ್​ ಗ್ರೂಪ್​ನಲ್ಲೇ ವ್ಯವಹಾರ… ಅಸಹ್ಯ ಹುಟ್ಟಿಸುತ್ತೆ ಇವರ ಕೃತ್ಯ

    ಹುಣಸೂರಲ್ಲಿ ಕಾರು-ಬೈಕ್​ಗಳ ನಡುವೆ ಭೀಕರ ಅಪಘಾತ: ಅಣ್ಣನ ಸಾವಿನ ಸುದ್ದಿ ಕೇಳಿ ಪ್ರಾಣಬಿಟ್ಟ ತಂಗಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts