ಮೂಲ್ಕಿ: ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಜತೆಗೆ ದಾನಿಯಾಗಿ ಸಮಾಜದ ಬಡ ಕುಟುಂಬಗಳಿಗೆ ಮೂಲ ಸವಲತ್ತುಗಳನ್ನು ಒದಗಿಸಿ ಉನ್ನತ ಸಾಧನೆಗೈದ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಅವರು ಸದಾ ಆದರಣೀಯ ಎಂದು ಆಧ್ಯಾತ್ಮಿಕ ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.
ಮೂಲ್ಕಿ ಕಿಲ್ಪಾಡಿಯ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಸಾಧಕರ ನೆಲೆಯಲ್ಲಿ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಅವರನ್ನು ಸನ್ಮಾನಿಸಿ ಮಾತನಾಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಹರಿಕೃಷ್ಣ ಪುನರೂರು, ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ವತಿಯಿಂದ ಅನೇಕ ಶೈಕ್ಷಣಿಕ, ಸಾಮಾಜಿಕ ಸಹಾಯ ಹಸ್ತ ಕಾರ್ಯಕ್ರಮಗಳು ನಡೆಯುತ್ತಿದ್ದು, ಸಮಾಜದ ದೀನ ವರ್ಗಕ್ಕೆ ಸ್ವಾಮೀಜಿ ನೀಡುತ್ತಿರುವ ಸಹಾಯ ಎಲ್ಲರಿಗೂ ಮಾದರಿ ಎಂದರು.
ಜ್ಯೋತಿಷಿ ವಿಶ್ವನಾಥ ಭಟ್, ಉಷಾ ಭಟ್, ಆಶ್ರಮದ ನಿರ್ದೇಶಕರಾದ ರಜನಿ ಸಿ.ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಗುರುಪ್ರಸಾದ್ ಭಟ್ ಮುಂಡ್ಕೂರು, ಪುನೀತ್ ಕೃಷ್ಣ ಉಪಸ್ಥಿತರಿದ್ದರು.