ಜೀವನ ಶಿಕ್ಷಣ ಕಲಿಸುವ ಯೋಜನೆ

Mul_education
Published on

ಮೂಲ್ಕಿ: ರಾಷ್ಟ್ರೀಯ ಸೇವಾ ಯೋಜನೆಯು ಜೀವನ ಶಿಕ್ಷಣ ಕಲಿಸುವ ಯೋಜನೆಯಾಗಿದೆ. ಮಕ್ಕಳ ವ್ಯಕ್ತಿತ್ವ ವಿಕಸನದ ಜತೆಗೆ ಊರಿನ ಜನರಿಗೂ ಉಪಯುಕ್ತವಾಗಿದೆ ಎಂದು ಕೆಮ್ರಾಲ್ ಗ್ರಾಪಂ ಅಧ್ಯಕ್ಷ ಮೈಯದ್ದಿ ಹೇಳಿದರು.

ಪಂಜದಗುತ್ತು ಶಾಂತರಾಮ ಶೆಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂಲ್ಕಿ ವಿಜಯಾ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಮೂಲ್ಕಿ ವಿಜಯಾ ಕಾಲೇಜು ಪ್ರಾಂಶುಪಾಲ ಪ್ರೊ.ವೆಂಕಟೇಶ ಭಟ್ ಅಧ್ಯಕ್ಷತೆ ವಹಿಸಿದ್ದರು. ಸುಬ್ರಮಣ್ಯ ಭಟ್, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು, ಉದ್ಯಮಿ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಡಾ.ಕಿಶೋರ್ ಕುಮಾರ್ ಶೆಟ್ಟಿ, ಸುರಗಿರಿ ದೇವಳದ ಅರ್ಚಕ ವಿಶ್ವೇಶ ಭಟ್, ಪಕ್ಷಿಕೆರೆ ಚರ್ಚ್ ಧರ್ಮಗುರು ಅನಿಲ್ ಆಲ್ಫ್ರೆಡ್ ಡಿಸೋಜ, ಎನ್‌ಎಸ್‌ಎಸ್ ಕಾರ್ಯದರ್ಶಿ ಶ್ರಾವ್ಯಾ ಹಾಗೂ ಆದಿತ್ಯ ಉಪಸ್ಥಿತರಿದ್ದರು.

ಎನ್‌ಎಸ್‌ಎಸ್ ಅಧಿಕಾರಿ ಅರುಣಾ ಸ್ವಾಗತಿಸಿದರು. ಸಿಂಚನಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net