ಶಿಕಾರಿಪುರ: ಶಿಕ್ಷಣದ ಜತೆಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳುವಿಕೆ ಮುಖ್ಯ. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಬೇಕು ಎಂದು ಅಕ್ಷರ ವಿದ್ಯಾಸಂಸ್ಥೆ ಸಂಸ್ಥಾಪಕ ರವಿಕುಮಾರ್ ಹೇಳಿದರು.
ಅಕ್ಷರ ರೆಸಿಡೆನ್ಷಿಯಲ್ ಸ್ಕೂಲ್‌ನಲ್ಲಿ ಆಯೋಜಿಸಿದ್ದ ತಾಲೂಕು ಕಸಬಾ ಹೋಬಳಿ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು. ಇಂತಹ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ ಎಂದು ತಿಳಿಸಿದರು.
ತಾಲೂಕು ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಕಾರ್ಯದರ್ಶಿ ಶ್ರೀನಿವಾಸ್ ತಡಸನಹಳ್ಳಿ ಮಾತನಾಡಿ, ಭಾರತ ದೇಶ ಸಾಂಸ್ಕೃತಿಕವಾಗಿ ಶ್ರೀಮಂತವಾಗಿದೆ. ಪರಂಪರೆಯನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದರು.
ಅಕ್ಷರ ಸಂಸ್ಥೆ ಕಾರ್ಯದರ್ಶಿ ಮಮತಾ ರವಿಕುಮಾರ್, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಖಜಾಂಚಿ ರಾಘವೇಂದ್ರ ಕುಲಕರ್ಣಿ, ಪ್ರಾಚಾರ್ಯ ಮಂಜುನಾಥ್, ನಾಗರಾಜ್ ಗೋನಾಲ್, ಸಿಆರ್‌ಪಿ ಪ್ರವೀಣ್, ಮುಖ್ಯಶಿಕ್ಷಕ ಕೃಷ್ಣಮೂರ್ತಿ ಕುಂಬ್ಳೆ, ಅಕ್ಷರ ಶಾಲೆ ಶಿಕ್ಷಕರು, ಕಸಬಾ ಹೋಬಳಿ ಪ್ರೌಢಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.