

ಕೋಟ: ಮೈ ಮತ್ತು ಮನಸ್ಸಿನ ಸಾಮರ್ಥ್ಯ ಬೆಳೆಸುವ ಅತಿ ದೊಡ್ಡ ವೇದಿಕೆ ಕ್ರೀಡೆ ಎಂದು ಕುಂದಾಪುರ ಪೊಲೀಸ್ ಠಾಣೆ ಸಹಾಯಕ ಸಬ್‌ಇನ್‌ಸ್ಪೆಕ್ಟರ್ ಧರ್ಮೇಂದ್ರ ಕುಮಾರ್ ಹೇಳಿದರು.
ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ವಾರ್ಷಿಕ ಕ್ರೀಡಾಕೂಟದಲ್ಲಿ ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದರು.
ಕೋಟೇಶ್ವರ ಗ್ರಾಪಂ ಅಧ್ಯಕ್ಷೆ ರಾಗಿಣಿ ದೇವಾಡಿಗ ಉದ್ಘಾಟಿಸಿದರು. ಕೋಟೇಶ್ವರ ಲಯನ್ಸ್ ಕ್ಲಬ್ ಅಧ್ಯಕ್ಷ ವಿಶ್ವನಾಥ್ ಕ್ರೀಡಾಧ್ವಜ ಹಾರಿಸಿದರು. ನಿವೃತ್ತ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಎಚ್.ಗೋಪಾಲ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.
ಪ್ರಾಂಶುಪಾಲ ಪ್ರಕಾಶ್ ಶೆಟ್ಟಿ ಸ್ವಾಗತಿಸಿ, ಉಪ ಪ್ರಾಂಶುಪಾಲ ಚಂದ್ರಶೇಖರ್ ಶೆಟ್ಟಿ ವಂದಿಸಿದರು. ಶಿಕ್ಷಕಿ ದಿವ್ಯಪ್ರಭಾ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ್ ಹೊಳ್ಳ ಮತ್ತು ಉದಯ ಮಡಿವಾಳ ಎಂ. ಕ್ರೀಡಾಕೂಟ ಸಂಘಟಿಸಿದರು.