ಹೆಬ್ರಿ: ಪ್ರತಿ ವ್ಯಕ್ತಿಯಲ್ಲೂ ಒಂದಲ್ಲ ಒಂದು ಸುಪ್ತ ಪ್ರತಿಭೆ ಇರುತ್ತದೆ. ಅದನ್ನು ಪ್ರರ್ದಶಿಸಲು ಇಂತಹ ವೇದಿಕೆ ಸಹಾಯಕ. ಸಂಸ್ಕೃತಿ ಮಕ್ಕಳಲ್ಲಿ ಸಂಸ್ಕಾರ ಕಲಿಸುವ ಜತೆಗೆ ದೇಶ ಪ್ರೇಮದಂತಹ ಗುಣ ರೂಢಿಸುವಲ್ಲಿ ಪೂರಕ ಎಂದು ಹೆಬ್ರಿ ತಾಲೂಕು ಕಸಾಪ ಅಧ್ಯಕ್ಷ ಮುದ್ದೂರು ಶ್ರೀನಿವಾಸ್ ಭಂಡಾರಿ ಹೇಳಿದರು.
ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಪ್ರತಿಭಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಪ್ರಾಂಶುಪಾಲ ಸುಧಾಕರ ಕೆ.ಜಿ. ಅಧ್ಯಕ್ಷತೆ ವಹಿಸಿದ್ದರು. ಸಾಂಸ್ಕೃತಿಕ ಸಂಘ ಸಂಚಾಲಕ ವಿಶ್ವೇಶ್ವರ ಎನ್.ಗಾಂವ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಮಲಾಕ್ಷಿ ವಂದಿಸಿದರು. ಸಂಗೀತಾ ಎಚ್.ಎಸ್. ಕಾರ್ಯಕ್ರಮ ನಿರೂಪಿಸಿದರು.