More

    ಶಿಕ್ಷಣ ವ್ಯವಸ್ಥೆ ಮರುರಚನೆಗೆ ಮನವಿ; ಸಚಿವ ಸಂಪುಟದಲ್ಲಿ ಮೊದಲ ಆದ್ಯತೆಯಾಗಿ ಚರ್ಚಿಸಲು ಒತ್ತಾಯ

    ಬೆಂಗಳೂರು: ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಪುನರ್ ರಚಿಸುವಂತೆ ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯು ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

    ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಸಮಿತಿಯ ರಾಜ್ಯ ಸರ್ಕಾರದ ಮೊದಲ ಸಚಿವ ಸಂಪುಟದಲ್ಲಿ ಶಾಲಾ ಶಿಕ್ಷಣದ ವಿಷಯವನ್ನು ಮೊದಲ ಆದ್ಯತೆಯ ವಿಷಯವಾಗಿ ಚರ್ಚಿಸಬೇಕೆಂದು ಮನವಿ ಮಾಡಿದೆ.

    ಹಿಂದಿನ ಬಿಜೆಪಿ ಸರ್ಕಾರವು ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ರಾಜಕಾರಣಕ್ಕೆ ಬಳಸಿಕೊಳ್ಳುವ ಮೂಲಕ ಸಾಕಷ್ಟು ಗೊಂದಲ ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ ನೂತನ ಸರ್ಕಾರವು ಶಿಕ್ಷಣವನ್ನು ಸಾಮಾಜಿಕ ಒಳಿತು ಮತ್ತು ಸಾಮಾಜಿಕ ಪರಿವರ್ತನೆಯ ಸಾಧನವೆಂಬ ವಿಶಾಲ ದೃಷ್ಟಿಯಲ್ಲಿ ಪರಿಭಾವಿಸಬೇಕಾಗಿದೆ.

    ಸಂವಿಧಾನದ ಆಶಯದಂತೆ ಸಾರ್ವಜನಿಕ ಶಿಕ್ಷಣವನ್ನು ಸಮಗ್ರವಾಗಿ ಬದಲಾಯಿಸಿ ಎಲ್ಲ ಮಕ್ಕಳಿಗೆ ಸಮಾನ ಗುಣಮಟ್ಟದ ಶಿಕ್ಷಣ ನೀಡುವ ‘ರಾಜ್ಯ ಶಿಕ್ಷಣ ನೀತಿ’ಯನ್ನು ರೂಪಿಸಿ, ಜಾರಿಗೊಳಿಸಬೇಕು. ಸಮಾನ ಗುಣಮಟ್ಟದ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಲು ಶಾಶ್ವತವಾದ ರಾಜ್ಯ ಶಿಕ್ಷಣ ಆಯೋಗ/ಪ್ರಾಧಿಕಾರವನ್ನು ಸ್ಥಾಪಿಸುವಂತೆ ವೇದಿಕೆಯ ಅಧ್ಯಕ್ಷ ವಿ ಪಿ. ನಿರಂಜನಾರಾಧ್ಯ ಒತ್ತಾಯಿಸಿದ್ದಾರೆ.

    ಪ್ರಮುಖ ಮನವಿಗಳು:
    ಶಾಲೆಗಳು ಆರಂಭವಾಗುವ ಮುನ್ನವೇ 13,352 ಪ್ರಾಥಮಿಕ ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಉಳಿದ ಖಾಲಿ ಇರುವ ಉದ್ದೆಗಳಿಗೆ ಜೂ.15ರೊಳಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಬೇಕು.

    ಶಾಲೆ ಆರಂಭಕ್ಕೆ ಮುನ್ನವೇ ಎಲ್ಲ ಮಕ್ಕಳಿಗೆ ದೊರೆಯಬೇಕಾದ ಪಠ್ಯಪುಸ್ತಕ, ಸಮವಸ್ತ್ರ, ಶೂ ಮತ್ತು ಸಾಕ್ಸ್‌ಗಳನ್ನು ತಕ್ಷಣವೇ ಒದಗಿಸಬೇಕು.

    ಕಳೆದ 4 ವರ್ಷಗಳಿಂದ ಸ್ಥಗಿತವಾಗಿರುವ ಶಾಲಾ ಮಕ್ಕಳಿಗೆ ಸೈಕಲ್ ವಿತರಿಸುವ ಯೋಜನೆಯನ್ನು ಕೂಡಲೇ ಆರಂಭಿಸಬೇಕು.

    ಶುದ್ಧ ಕುಡಿಯುವ ನೀರು, ಶೌಚಾಲಯ, ಕೊಠಡಿ ಸೇರಿ ಮೂಲ ಸೌಕರ್ಯಗಳನ್ನು ಪ್ರಥಮ ಆದ್ಯತೆಯಾಗಿ ಪರಿಗಣಿಸಬೇಕು.

    ಇದನ್ನೂ ಓದಿ:ಮುಸ್ಲಿಂ ಯುವಕನನ್ನು ಮದುವೆಯಾಗಲಿದ್ದಾಳೆ ಬಿಜೆಪಿ ಮುಖಂಡನ ಮಗಳು! 

    2023-24ನೇ ಸಾಲಿನ ಪಠ್ಯಪುಸ್ತಕಗಳು ಮುದ್ರಣಗೊಂಡು ಈಗಾಗಲೇ ಶೇ. 98.21 ಸರಬರಾಜಾಗಿದೆ. ಈ ಪಠ್ಯಪುಸ್ತಕಗಳಲ್ಲಿ ಬದಲಾಗಿದ್ದ ಪ್ರಮುಖ ಪಾಠಗಳನ್ನು ಮತ್ತು ಕಲಿಕಾಂಶಗಳನ್ನು ಕಲಿಕೆ ಮತ್ತು ಮೌಲ್ಯಮಾಪನದಿಂದ ಕೈಬಿಡಬೇಕು.

    ಇದನ್ನೂ ಓದಿ: ಸಚಿವ ಸ್ಥಾನಕ್ಕೆ ಲಾಬಿ; ದೆಹಲಿಗೆ ಹೊರಟ ಕೈ ಶಾಸಕರು ಯಾರ್‍ಯಾರು ಗೊತ್ತಾ..?

    ಖಾಸಗಿ ಸ್ವಾಯತ್ತ ವಿಶ್ವವಿದ್ಯಾಲಯಗಳನ್ನು ತೆರೆಯಲು ನೀಡುವ ಅನುಮತಿಯನ್ನು ಸ್ಥಗಿತಗೊಳಿಸಿ, ಸಾರ್ವಜನಿಕ ವಿಶ್ವವಿದ್ಯಾಲಯಗಳನ್ನು ಬಲವರ್ಧನೆಗೊಳಿಸಲು ಮತ್ತು ವಿಸ್ತರಿಸಲು ಕ್ರಮ ಕೈಗೊಳ್ಳಬೇಕು.
    ರಾಜ್ಯ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಶೇ.20 ಅನುದಾನ ಮೀಸಲಿಡಬೇಕು.

    ಗಡ್ಡ ಬೋಳಿಸಿಕೊಳ್ಳುವ ಸಮಯ ಇನ್ನೂ ಬಂದಿಲ್ಲ ಎಂದ ಡಿಕೆಶಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts