

ಡೆಹ್ರಾಡೂನ್: ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡದ ಕೇದಾರನಾಥಕ್ಕೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದರು.
ಹಿಮಾಚಲ ಪ್ರದೇಶದ ಚಂಬಾ ಮಹಿಳೆಯರು ತಯಾರಿಸಿದ 'ಚೋಳ ಡೋರಾ' ಹೆಸರಿನ ವಿಶೇಷ ಉಡುಪನ್ನು ಧರಿಸಿ ಕೇದಾರನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ, ವಿಶೇಷ ಪೂಜೆ ಸಲ್ಲಿಸಿದರು. ಕೇದಾರನಾಥದಲ್ಲಿರುವ ಆದಿ ಗುರು ಶಂಕರಾಚಾರ್ಯ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ನಮಿಸಿದರು.
ಮಂದಾಕಿನಿ ಮತ್ತು ಸರಸ್ವತಿ ಅಸ್ತಪಥದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದ ಪ್ರಧಾನಿ, ಬಳಿಕ ಅಭಿವೃದ್ಧಿ ಕಾಮಗಾರಿಗಳಲ್ಲಿ ಕೆಲಸ ಮಾಡುತ್ತಿರುವ ಶ್ರಮಜೀವಿಗಳೊಂದಿಗೆ ಕೆಲಕಾಲ ಸಂವಾದ ನಡೆಸಿದರು.
ಕೇದಾರನಾಥ ನಡುವೆ ಹೊಸ ರೋಪ್ ವೇ ಯೋಜನೆ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ 3400 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕೇದಾರನಾಥ ಮತ್ತು ಮತ್ತು ಬದರಿನಾಥದಲ್ಲಿ ಶಂಕು ಸ್ಥಾಪನೆ ನೆರವೇರಿಸಿದರು.