More

    ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಳಗ್ಗೆ 11.55ಕ್ಕೆ ಯಲಹಂಕ ವೈಮಾನಿಕ ವಾಯುನೆಲೆಗೆ ವಿಶೇಷ ವಿಮಾನದಲ್ಲಿ ಆಗಮಿಸಿದರು. ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್​ಚಂದ್​ ಗೆಲ್ಹೋಟ್​, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​, ಮಾಜಿ ಸಿಎಂ‌ ಬಿ.ಎಸ್​.ಯಡಿಯೂರಪ್ಪ ಪ್ರಧಾನಿ ಅವರನ್ನು ಸ್ವಾಗತಿಸಿದರು. ಇನ್ನು ಮೋದಿ ಅವರನ್ನ ಕಣ್ತುಂಬಿಕೊಳ್ಳಲು ಮೇಕ್ರಿ ಸರ್ಕಲ್ ಬಳಿ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಜಮಾವಣೆಯಾಗಿದ್ದಾರೆ. ಪ್ರಧಾನಿ ಅವರು ಸಂಚರಿಸುವ ಮಾರ್ಗದಲ್ಲಿ ಖಾಕಿ ಹೈ ಅಲರ್ಟ್​ ಮಾಡಲಾಗಿದೆ.

    ಯಲಹಂಕ ವೈಮಾನಿಕ ವಾಯುನೆಲೆಯಿಂದ ನೇರವಾಗಿ ಭಾರತೀಯ ವಿಜ್ಞಾನ ಸಂಸ್ಥೆಗೆ ತೆರಳುವ ಪ್ರಧಾನಿ ಮೋದಿ, ಮೆದುಳು ಸಂಶೋಧನಾ ಕೇಂದ್ರ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಬಗ್ಚಿ ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಬಳಿಕ, ಮಧ್ಯಾಹ್ನ 1.45ಕ್ಕೆ ಜ್ಞಾನಭಾರತಿ, ಡಾ.ಬಿ.ಆರ್​.ಅಂಬೇಡ್ಕರ್​ ಸ್ಕೂಲ್​ ಆ್​ ಎಕನಾಮಿಕ್ಸ್​ (ಬೇಸ್​) ವಿವಿ ಕ್ಯಾಂಪಸ್​ ಉದ್ಘಾಟನೆ, ಮೇಲ್ದರ್ಜೆಗೇರಿಸಿದ 150 ಐಟಿಐಗಳ ಲೋಕಾರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 2.45ಕ್ಕೆ ಕೊಮ್ಮಘಟ್ಟದಲ್ಲಿ ಸಾರ್ವಜನಿಕ ಸಮಾರಂಭ ನಡೆಯಲಿದೆ. ಸಬ್​ರ್ಬನ್​ ರೈಲ್ವೆ ಮಾರ್ಗ ನಿರ್ಮಾಣ ಸೇರಿ ವಿವಿಧ ರೈಲ್ವೆ ಹಾಗೂ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಲಿದೆ.

    ಮೈಸೂರಿನಲ್ಲಿ ನಾಳೆ(ಜೂ.21) ನಡೆಯಲಿರುವ ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸುವುದು ಪ್ರಧಾನಿ ಮೋದಿ ಅವರ ಭೇಟಿಯ ಮುಖ್ಯ ಉದ್ದೇಶವಾಗಿದ್ದು, ಅದರೊಂದಿಗೆ ಅಭಿವೃದ್ಧಿ ಪಥವನ್ನು ಜೋಡಿಸಿ ಬೆಂಗಳೂರು ಬ್ರಾಂಡ್​ಗೆ ಹೊಸ ಹೊಳಪು ನೀಡಲು ರಾಜ್ಯ ನಾಯಕತ್ವ ಮುಂದಾಗಿದೆ. ಬಹುಸಾವಿರ ಕೋಟಿ ರೂ.ಗಳ ಮೊತ್ತದ ಯೋಜನೆಗಳಿಗೆ ಅಡಿಗಲ್ಲು ಮತ್ತು ಉದ್ಘಾಟನೆಗಳೆಲ್ಲ ಬೆಂಗಳೂರು ಕೇಂದ್ರಿತವಾಗಿದೆ.

    ಮೈಸೂರಲ್ಲಿ ಪ್ರಧಾನಿ ಮೋದಿ ಜತೆ 45 ನಿಮಿಷ ಯೋಗ ಮಾಡಲಿದ್ದಾರೆ 15 ಸಾವಿರ ಜನ: 1200 ವಿದ್ಯಾರ್ಥಿಗಳೂ ಭಾಗಿ

    ಕನ್ನಡದಲ್ಲೇ ಟ್ವೀಟ್​ ಮಾಡಿದ ಪ್ರಧಾನಿ ನರೇಂದ್ರ ಮೋದಿ

    ಬೆಂಗಳೂರು, ಮೈಸೂರಿಗೆ ಪ್ರಧಾನಿ ಮೋದಿ: ಇಂದಿನ ಕಾರ್ಯಕ್ರಮಗಳ ವಿವರ ಇಲ್ಲಿದೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts