ಮಂಗಳೂರಲ್ಲಿ ವಿಷಾನಿಲ ಸೋರಿಕೆ: ತಡರಾತ್ರಿ ಮೂವರು ದುರ್ಮರಣ, ಐವರ ಸ್ಥಿತಿ ಗಂಭೀರ

Poisongas leak
Published on

ಮಂಗಳೂರು: ಇಲ್ಲಿನ ಹೊರವಲಯದ ಎಸ್​ಇಝೆಡ್ (ವಿಶೇಷ ಆರ್ಥಿಕ ವಲಯ) ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ವಿಷಾನಿಲ ಸೋರಿಕೆಯಾಗಿ ಮೂವರು ಮೃತಪಟ್ಟಿದ್ದು, ಐವರ ಸ್ಥಿತಿ ಗಂಭೀರವಾಗಿದೆ.

ಮಂಗಳೂರು ಹೊರವಲಯದ ಎಸ್​ಇಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೀನಿನ ಫ್ಯಾಕ್ಟರಿಯ ಟ್ಯಾಂಕೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಈ ದುರಂತ ಸಂಭವಿಸಿದೆ. ಭಾನುವಾರ ರಾತ್ರಿ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದಾನೆ. ಈ ವೇಳೆ ಏಕಾಏಕಿ ಅಸ್ವಸ್ಥಗೊಂಡು ಬಿದ್ದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು 8 ಕಾರ್ಮಿಕರು ಹೋಗಿದ್ದಾರೆ. ಈ ವೇಳೆ ಅವರು ಕೂಡ ಅಸ್ವಸ್ಥಗೊಂಡು, ಉಸಿರಾಟದಲ್ಲಿ ಏರುಪೇರಾಗಿದೆ. ಅಸ್ವಸ್ಥಗೊಂಡವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರಲ್ಲಿ ಮೂವರು ಮೃತಪಟ್ಟಿದ್ದಾರೆ. 5 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ.

ಮೃತಪಟ್ಟವರೆಲ್ಲರೂ ಪಶ್ಚಿಮ ಬಂಗಾಳ ಮೂಲದವರು. ಸಮಿರುಲ್ಲ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಸಾಜ್ ಮೃತ ದುರ್ದೈವಿಗಳು. ಮಿರಾಜುಲ್ಲ್ ಇಸ್ಲಾಂ, ಸರಾಫತ್ ಆಲಿ, ಅಜನ್ ಆಲಿ, ಕರೀಬುಲ್ಲ, ಅಫ್ತಲ್ ಮಲ್ಲಿಕ್ ಸೇರಿದಂತೆ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net