More

    ಚಾಮರಾಜನಗರ ಪ್ರಕರಣ: ಸಚಿವ ಸುರೇಶ್ ಕುಮಾರ್ ವಿರುದ್ಧ ದೂರು ದಾಖಲು

    ಚಾಮರಾಜನಗರ: ಜಿಲ್ಲಾ ಕೋವಿಡ್‌ ಆಸ್ಪತ್ರೆ ಹಾಗೂ ಜಿಲ್ಲೆಯ ಇತರೆ ಆಸ್ಪತ್ರೆಗಳಲ್ಲಿ ಆಮ್ಲಜನಕ ಸಿಗದೇ ಮೃತಪಟ್ಟ ಸೋಂಕಿತರ ಸಾವಿಗೆ ಕಾರಣಕರ್ತರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಪುಟ್ಟಸ್ವಾಮಿ ಅವರು ಚಾಮರಾಜನಗರ ಪಟ್ಟಣ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

    ಸೋಂಕಿತರು ಆಮ್ಲಜನಕ ಸಿಗದೇ ತೀವ್ರತರ ನರಳಾಟದಿಂದ ಸಾವನ್ನಪ್ಪಿದ್ದಾರೆ. ಇದಕ್ಕೆ ಕರ್ತವ್ಯ ನಿರತ ವೈದ್ಯರು, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಂ.ಸಿ.ರವಿ, ಚಾಮರಾಜನಗರ ಮೆಡಿಕಲ್‌ ಕಾಲೇಜಿನ ಸಂಜೀವ್‌ ರೆಡ್ಡಿ, ಜಿಲ್ಲಾ ಸರ್ಜನ್‌ಗಳಾದ ಡಾ. ಮುರುಗೇಶ್‌, ಡಾ. ಶ್ರೀನಿವಾಸ್‌ ಅವರ ನೇತೃತ್ವದ ಆಡಳಿತ ಮಂಡಳಿ, ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಸುರೇಶ್‌ಕುಮಾರ್‌, ಆರೋಗ್ಯ ಸಚಿವ ಡಿ.ಸುಧಾಕರ್‌, ಆಕ್ಸಿಜನ್‌ ಪೂರೈಕೆ ಗುತ್ತಿಗೆದಾರರು,

    ಕೋವಿಡ್‌ ಸಂಬಂಧಿತ ಹಿರಿಯ ವೈದ್ಯಾಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದ ಈ ದುರ್ಘಟನೆ ನಡೆದಿದೆ. ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದಿಂದ ಅಮಾಯಕ ಜನರ ಸಾವಿಗೆ ಕಾರಣಕರ್ತರಾದ ಅಧಿಕಾರಿಗಳು ಹಾಗೂ ರಾಜಕಾರಣಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ಮೃತ ರೋಗಿಗಳ ಕುಟುಂಬಕ್ಕೆ ತಲಾ 50 ಲಕ್ಷ ರೂ ಪರಿಹಾರ ನೀಡಬೇಕು ಎಂದು ವಕೀಲ ಪುಟ್ಟಸ್ವಾಮಿ ಮನವಿ ಮಾಡಿದ್ದಾರೆ.

    ಸ್ಯಾಂಡಲ್​ವುಡ್​ನಲ್ಲಿ ನಿಲ್ಲದ ಕರೊನಾ ಕರಿನೆರಳು! ಮತ್ತೋರ್ವ ನಿರ್ಮಾಪಕ ಕೋವಿಡ್​ಗೆ ಬಲಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts