ಬೆಳ್ಳಂಬೆಳಗ್ಗೆ 62 ಮನೆಗಳ ಮೇಲೆ ದಾಳಿ: ಸುಖ ನಿದ್ದೆಯಲ್ಲಿದ್ದ ರೌಡಿಗಳಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಆಗ್ನೇಯ ವಿಭಾಗದ ಪೊಲೀಸರು ತಮ್ಮ ವ್ಯಾಪ್ತಿಯ 62 ರೌಡಿಗಳ ಮನೆ ಮೇಲೆ ದಾಳಿ ನಡೆಸಿ 18 ರೌಡಿಗಳನ್ನು ವಶಕ್ಕೆ ಪಡೆದಿದ್ದಾರೆ. ರೌಡಿಗಳನ್ನು ಹೆಡೆಮುರಿ ಕಟ್ಟಲು ಪಣತೊಟ್ಟಿರುವ ಪೊಲೀಸರು ಕೆಲ ದಿನಗಳಿಂದ ಕಟ್ಟುನಿಟ್ಟಾಗಿ ಕಾರ್ಯಾಚರಣೆಗೆ ಇಳಿದು ಬಿಸಿ ಮುಟ್ಟಿಸುತ್ತಿದ್ದಾರೆ. ಶನಿವಾರ ಮುಂಜಾನೆ ಖುದ್ದು ಆಗ್ನೇಯ ವಿಭಾಗ ಡಿಸಿಪಿ ಶ್ರೀನಾಥ್ ಮಹದೇವ್ ಜೋಶಿ, ಮಡಿವಾಳ ಎಸಿಪಿ ಸುದೀರ್ ಹೆಗ್ಡೆ ನೇತೃತ್ವದಲ್ಲಿ 62 ಪುಡಾರಿಗಳ ಮನೆ ಮೇಲೆ ದಾಳಿ ಮಾಡಿ ಇತ್ತೀಚಿನ ಕೃತ್ಯಗಳನ್ನ … Continue reading ಬೆಳ್ಳಂಬೆಳಗ್ಗೆ 62 ಮನೆಗಳ ಮೇಲೆ ದಾಳಿ: ಸುಖ ನಿದ್ದೆಯಲ್ಲಿದ್ದ ರೌಡಿಗಳಿಗೆ ಬಿಸಿ ಮುಟ್ಟಿಸಿದ ಪೊಲೀಸರು