ಸಾಗರ ತಾಲೂಕಿನ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದ ಶಿಕ್ಷಕ ಅರೆಸ್ಟ್

rape sex
Published on

ಸಾಗರ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆಯಲ್ಲಿ ಶಿಕ್ಷರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಚಂದ್ರಶೇಖರ ಬಂಧಿತ ಆರೋಪಿ. ಸಾಗರ ತಾಲೂಕಿನ ತಾಳಗೊಪ್ಪ ಹೋಬಳಿ ಮರತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕನಾಗಿದ್ದ ಚಂದ್ರಶೇಖರ, ಶಾಲೆಯಲ್ಲಿ ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಪಾಲಕರು ದೂರು ನೀಡಿದ್ದರು.

ಬುಧವಾರ ತಡರಾತ್ರಿ ಪೋಸ್ಕೊ ಅಡಿಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಶಿಕ್ಷಣ ಇಲಾಖೆಯು ಚಂದ್ರಶೇಖರ್ ಅವರನ್ನು ಕೆಲಸದಿಂದ ಅಮಾನತು ಮಾಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿಂಬ ಕೆ.ಆರ್. ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net