More

    ಆರ್‌ಟಿಇ ಪ್ರವೇಶ ಪ್ರಕ್ರಿಯೆ ಮುಂದೂಡಿಕೆ

    ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ(ಆರ್‌ಟಿಇ) 2021-22ನೇ ಸಾಲಿನ ಪ್ರವೇಶ ಪ್ರಕ್ರಿಯೆಯನ್ನು ಮುಂದೂಡಿದೆ.

    ಕರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಸೆಮಿ ಲಾಕ್‌ಡೌನ್ ಜಾರಿ ಮಾಡಿದೆ. ಹಾಗಾಗಿ ಪ್ರವೇಶ ಪ್ರಕ್ರಿಯೆಯನ್ನು ಮುಂದೂಡಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

    ಅರ್ಜಿ ಸಲ್ಲಿಸಲು ಶಿಕ್ಷಣ ಇಲಾಖೆಯು ಏ.20 ಕೊನೆಯ ದಿನ ಎಂದು ನಿಗದಿ ಮಾಡಲಾಗಿತ್ತು. ಒಟ್ಟಾರೆ ರಾಜ್ಯದಲ್ಲಿರುವ 34 ಶೈಕ್ಷಣಿಕ ಜಿಲ್ಲೆಗಳಿಂದ 11,925 ಅರ್ಜಿಗಳು ಸಲ್ಲಿಕೆಯಾಗಿವೆ.

    ಈ ಹಿಂದಿನ ವೇಳಾಪಟ್ಟಿ ಪ್ರಕಾರ ಏ.30ರಂದು ಲಾಟರಿ ಪ್ರಕ್ರಿಯೆಗೆ ಅರ್ಹವಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿ, ಮೇ 7ರಂದು ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ನಡೆಸಬೇಕಾಗಿತ್ತು. ಆದರೆ, ಸೆಮಿ ಲಾಕ್‌ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ನಿಗದಿತ ದಿನಾಂಕದಂದು ನಡೆಸಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕ ಎಂ.ಪ್ರಸನ್ನ ಕುಮಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಕರೊನಾ ಮೂರನೇ ಅಲೆಗೆ ಮಕ್ಕಳೇ ಟಾರ್ಗೆಟ್! ರಕ್ಷಣೆ ಹೇಗೆ? ಇಲ್ಲಿದೆ ತಜ್ಞ ವೈದ್ಯರು ಕೊಟ್ಟ ಮಹತ್ವದ ಸಲಹೆ

    ರೋಹಿಣಿ ಸಿಂಧೂರಿ ಇಡೀ ಕುಟುಂಬಕ್ಕೆ ಕರೊನಾ ಸೋಂಕು!

    ಅನುಮಾನಾಸ್ಪದವಾಗಿ ಪತ್ನಿ ಸತ್ತ 5 ದಿನಕ್ಕೆ ಸಾವಿನ ಮನೆಯ ಕದ ತಟ್ಟಿದ ಟೆಕ್ಕಿ! ಕಳೆದ ತಿಂಗಳಷ್ಟೆ ಮದ್ವೆ ಆಗಿದ್ದವರ ಬದುಕಲ್ಲಿ ದುರಂತ

    ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts