VIDEO| ಪ್ರಾಣವನ್ನೇ ಪಣಕ್ಕಿಟ್ಟು ಜಲಾವೃತಗೊಂಡ ಗ್ರಾಮಗಳಲ್ಲಿ ಬೆಳಕು ಹರಿಸಿದ ಪವರ್​ಮನ್​!

ಹಾವೇರಿ: ಧಾರಾಕಾರ ಮಳೆಯಿಂದಾಗಿ ಪ್ರವಾಹಕ್ಕೆ ಸಿಲುಕಿದ್ದ ಗ್ರಾಮಕ್ಕೆ ಕೆಇಬಿ ಪವರ್​ಮನ್​ವೊಬ್ಬರು ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​​ ಆಗುತ್ತಿದ್ದು, ನೆಟ್ಟಿಗರಿಂದ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಹಾವೇರಿ ಜಿಲ್ಲೆಯ ಹಿರೆಕೇರೂರು ತಾಲೂಕಿನ ಚಿಕ್ಕೊಣತಿ ಗ್ರಾಮದಲ್ಲಿ ಧಾರಾಕಾರ ಮಳೆಯಾಗಿದ್ದು, ವಿದ್ಯುತ್​ ಕಂಬ ಸೇರಿದಂತೆ ಇಡೀ ಪ್ರದೇಶ ಜಲಾವೃತವಾಗಿ ವಿದ್ಯುತ್​ ಸಂಪರ್ಕ ಕಡಿತಗೊಂಡಿತ್ತು. ಪವರ್​ಮನ್​ ಮುಕೇಶ ಪಾಟೀಲ್ ಎಂಬುವರು ನೀರಲ್ಲಿ ಈಜಿಕೊಂಡು ಹೋಗಿ ವಿದ್ಯುತ್​ ಕಂಬವನ್ನೇರಿ ಲೈನ್ ಕಟ್ ಮಾಡಿ … Continue reading VIDEO| ಪ್ರಾಣವನ್ನೇ ಪಣಕ್ಕಿಟ್ಟು ಜಲಾವೃತಗೊಂಡ ಗ್ರಾಮಗಳಲ್ಲಿ ಬೆಳಕು ಹರಿಸಿದ ಪವರ್​ಮನ್​!