ಕನ್ನಡದಲ್ಲೇ ಟ್ವೀಟ್​ ಮಾಡಿದ ಪ್ರಧಾನಿ ನರೇಂದ್ರ ಮೋದಿ

Prime Minister narendra Modi
Published on

ಬೆಂಗಳೂರು: ಕನ್ನಡದಲ್ಲಿ ಟ್ವೀಟ್​ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮಗಳಲ್ಲಿ ಭಾಗವಹಿಸುವೆ ಎಂದು ಸುದೀರ್ಘವಾಗಿ ಬರೆದಿದ್ದಾರೆ.

@iiscbangalore ಅಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಿಸಲಾಗುವುದು. ಬಾಗ್ಚಿ-ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿಲಾನ್ಯಾಸ ನೆರವೇರಿಸಲಾಗುವುದು. ಇಂದು ಅಪರಾಹ್ನ, ನಾನು ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್), ಬೆಂಗಳೂರು ಇಲ್ಲಿ ಬೇಸ್ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಉದ್ಘಾಟನೆ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯ ಅನಾವರಣ. 150 ಟೆಕ್ ಹಬ್​ಗಳ ಲೋಕಾರ್ಪಣೆ ಕೂಡ ಮಾಡುವೆ. ಇವನ್ನು ಐಟಿಐಗಳನ್ನು ಉನ್ನತೀಕರಿಸಿ ಅಭಿವೃದ್ಧಿಗೊಳಿಸಲಾಗಿದೆ ಎಂದು ಟ್ವೀಟ್​ ಮಾಡಿದ್ದಾರೆ.

ಬೆಂಗಳೂರಿನ ಕಾರ್ಯಕ್ರಮದಲ್ಲಿ, 27,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಇಲ್ಲವೆ ಶಂಕುಸ್ಥಾಪನೆ. ಈ ಕಾಮಗಾರಿಗಳು ವಿವಿಧ ಕ್ಷೇತ್ರಗಳಿಗೆ ಸೇರಿದ್ದು ಬೆಂಗಳೂರಿನ ಹಾಗೂ ಸುತ್ತಮುತ್ತಲಿನ ಜನರ 'ಸುಗಮ ಜೀವನ'ಕ್ಕೆ ನೆರವಾಗಲಿದೆ. ಇಂದು ಸಂಜೆ 5.30ರ ವೇಳೆಗೆ ಮೈಸೂರು ತಲುಪುವೆ. ಅಲ್ಲಿಯೂ ಪ್ರಮುಖ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಇಲ್ಲವೆ ಶಿಲಾನ್ಯಾಸ ನೆರವೇರಿಸುವೆ. ಸುತ್ತೂರು ಮಠದ ಕಾರ್ಯಕ್ರಮದಲ್ಲಿಯೂ ಭಾಗಿಯಾಗುವೆ. ನಾಳೆ ಬೆಳಗ್ಗೆ, ಮೈಸೂರಿನಲ್ಲಿ ಯೋಗ ದಿನದ ಕಾರ್ಯಕ್ರಮವೂ ನೆರವೇರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net