ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್; ಕರೆಂಟ್​​ ಶಾಕ್​​ಗೆ 35 ಪ್ರಯಾಣಿಕರು ಅಸ್ವಸ್ಥ

smg bus
Published on

ಶಿವಮೊಗ್ಗ: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ವಿದ್ಯುತ್ ತಂತಿ ತಗುಲಿ 35 ಮಂದಿ ಪ್ರಯಾಣಿಕರು ಅಸ್ವಸ್ಥಗೊಂಡಿರು ಘಟನೆ ಸಾಗರ ತಾಲೂಕಿನ ಗೆಣಸಿನಕುಣಿ ಸಮೀಪ ನಡೆದಿದೆ.

ಗೆಣಸಿನಕುಣಿ ಸಮೀಪ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.  ಈ ವೇಳೆ ಬಸ್​​ನ ಮೇಲೆ ವಿದ್ಯುತ್ ತಂತಿ ಹರಿದು ಬಿದ್ದಿದೆ. ಇದರಿಂದಾಗಿ ಬಸ್ ಒಳಗಿದ್ದ ಪ್ರಯಾಣಿಕರಿಗೆ ವಿದ್ಯುತ್ ಶಾಕ್ ತಗುಲಿದೆ. 35 ಮಂದಿ ಪ್ರಯಾಣಿಕರು ಅಸ್ವಸ್ಥಗೊಂಡಿದ್ದಾರೆ.

ವಿದ್ಯುತ್ ಶಾಕ್ ನಿಂದ ಅಸ್ವಸ್ಥಗೊಂಡಿರುವವರನ್ನು ಕೂಡಲೇ ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡಿರುವ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬಸ್ ಮೇಲೆ ವಿದ್ಯುತ್ ತಂತಿ ಬಿದ್ದ ಕೆಲವೇ ಕ್ಷಣಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಭಾರಿ ಅನಾಹುತ ತಪ್ಪಿದೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net