ಖಾಸಗಿ ನೌಕರರ ನಿವೃತ್ತಿ ವಯಸ್ಸು 58ರಿಂದ 60ಕ್ಕೆ ಹೆಚ್ಚಳ: ಸರ್ಕಾರದ ಆದೇಶ ಎತ್ತಿ ಹಿಡಿದ ಧಾರವಾಡ ಹೈಕೋರ್ಟ್

Dharwad HighCourt
Published on

ಧಾರವಾಡ: ಖಾಸಗಿ ನೌಕರರ ನಿವೃತ್ತಿ ವಯಸ್ಸನ್ನು 58ರಿಂದ 60ಕ್ಕೆ ಏರಿಸಬೇಕು ಎಂಬ ಸರ್ಕಾರದ ಆದೇಶವನ್ನು ಧಾರವಾಡ ಹೈಕೋರ್ಟ್ ಪೀಠ ಎತ್ತಿ ಹಿಡಿದಿದೆ.

ಕರ್ನಾಟಕ ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶಗಳ ತಿದ್ದುಪಡಿ ನಿಯಮಗಳ ಮಾದರಿ ಅನ್ವಯ ನೌಕರರ ನಿವೃತ್ತಿ ವಯಸ್ಸನ್ನು ಏರಿಸಿ ಸರ್ಕಾರ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಹರಿಹರದ ಖಾಸಗಿ ಕಂಪನಿಯೊಂದು ಹೈಕೋರ್ಟ್ ಮೊರೆ ಹೋಗಿತ್ತು.

ಕಂಪನಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ 2021ರ ಸೆ. 17ರಂದು ವಜಾ ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಕಂಪನಿ ಮೇಲ್ಮನವಿ ಸಲ್ಲಿಸಿತ್ತು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net