More

    ಉದ್ಯೋಗದ ಮಾಹಿತಿ ನೀಡಲು ಕಾರ್ಯಕ್ರಮ

    ಶಿವಮೊಗ್ಗ: ಪರಿಶಿಷ್ಟರ ಅಭಿವೃದ್ಧಿಗಾಗಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬೇಕೆಂದು ಕೆಸಿಐಸಿ ಜಿಲ್ಲಾ ಕಾರ್ಯಕ್ರಮ ಸಂಯೋಜನಾಧಿಕಾರಿ ಜೆ.ನಿತೀಶ್ ಹೇಳಿದರು.

    ಸಮಾಜ ಕಲ್ಯಾಣ ಇಲಾಖೆ, ಕುವೆಂಪು ವಿವಿ ಸಹಯೋಗದಲ್ಲಿ ಸೋಮವಾರ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಏರ್ಪಡಿಸಿದ್ದ ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಉದ್ಯೋಗದ ಬಗ್ಗೆ ಯೋಚನೆ ಮಾಡುತ್ತಲೇ ಇರುತ್ತಾರೆ. ಆದರೆ ಅವರಿಗೆ ಸರಿಯಾದ ಮಾಹಿತಿ ಇರುವುದಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗಾಗಿ ಉದ್ಯೋಗದ ಬಗ್ಗೆ ಮಾಹಿತಿ ನೀಡಲು ಕಾರ್ಯಕ್ರಮ ರೂಪಿಸಲಾಗಿದೆ ಎಂದರು.
    ತರಬೇತಿ ಕಾರ್ಯಗಾರದಲ್ಲಿ ಖಾಸಗಿ ಕಂಪನಿಗಳಲ್ಲಿ ಲಭ್ಯವಿರುವ ಉದ್ಯೋಗಗಳ ಬಗ್ಗೆ ಮಾಹಿತಿ ನೀಡಲಾಗುವುದು. ವಿದ್ಯಾರ್ಥಿಗಳು ತಾವು ಓದುತ್ತಲೇ ಅರೆಕಾಲಿಕವಾಗಿ ಉದ್ಯೋಗ ಮಾಡಬಹುದು. ಆನ್‌ಲೈನ್ ಮೂಲಕ ಉದ್ಯೋಗ ಪಡೆಯಬಹುದು. ಮಾಸಿಕ ಒಂದು ಸಾವಿರ ರೂ.ನಿಂದ ಮೂರು ಸಾವಿರ ರೂ.ವರೆಗೆ ದುಡಿಯಬಹುದು. ಕಾರ್ಯಾಗಾರದಲ್ಲಿ ಭಾಗವಹಿಸಿದವರಿಗೆ ಪ್ರಮಾಣಪತ್ರ ನೀಡಲಾಗುವುದು. ಇದರಿಂದಾಗಿ ವಿದ್ಯಾರ್ಥಿಗಳು ಸಹಾಯಧನ ಪಡೆಯಬಹುದು ಎಂದು ಹೇಳಿದರು.
    ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಕೆ.ಎನ್.ಮಂಜುನಾಥ್ ಮಾತನಾಡಿ, ನಮ್ಮ ಕಾಲೇಜಿನಲ್ಲಿ ಸುಮಾರು 1,450 ವಿದ್ಯಾರ್ಥಿಗಳಿದ್ದಾರೆ. ಇವರಲ್ಲಿ ಗ್ರಾಮೀಣ ಪ್ರದೇಶದವರೇ ಹೆಚ್ಚು. ಇಂತಹ ಕಾರ್ಯಾಗಾರದಿಂದ ಅವರೆಲ್ಲರಿಗೂ ಪ್ರಯೋಜನವಾಗುತ್ತದೆ ಎಂದರು.
    ಪ್ರಾಚಾರ್ಯ ಡಾ. ಸೈಯ್ಯದ್ ಸನಾವುಲ್ಲಾ, ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಜಗನ್ನಾಥ್, ಅಧಿಕಾರಿ ಹರೀಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts