ಕಡಬ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಕರ ನಿಯೋಜಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ.
ಚೇರು ಶಾಲೆಗೆ ಅತಿಥಿ ಶಿಕ್ಷಕರನ್ನು ನಿಯೋಜಿಸುವಂತೆ ಪಾಲಕರು ಬಿಳಿನೆಲೆ ಗ್ರಾಮ ಪಂಚಾಯಿತಿ ವಠಾರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದ್ದು, ಸೋಮವಾರ ಮತ್ತೆ ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಬಿಳಿನೆಲೆ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಸಂಪರ್ಕಿಸಿ, ಚೇರು ಶಾಲೆಗೆ ವಾರದ ಮೂರು ದಿನ ಕಾಯಂ ಶಿಕ್ಷಕರನ್ನು ಹಾಗೂ ವಾರದ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.