

ಕಲಬುರಗಿ: ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರ ಪತಿಗೆ ರಾಜೇಶ್ ಹಾಗರಗಿಗೆ ಕಲಬುರಗಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಬಿಜೆಪಿ ನಾಯಕಿಯಾಗಿ ಗುರುತಿಸಿಕೊಂಡಿದ್ದ ದಿವ್ಯಾ ಹಾಗರಗಿ, ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾರ್ಯದರ್ಶಿ ಕೂಡ. ರಾಜೇಶ್ ಈ ಶಾಲೆಯ ಅಧ್ಯಕ್ಷ. ಕಲಬುರಗಿ ಜ್ಞಾನಜ್ಯೋತಿ ಶಾಲೆ ಕೇಂದ್ರದಲ್ಲಿ ಪಿಎಸ್ಐ ಪರೀಕ್ಷೆ ಬರೆದ ಬಹುತೇಕರು ಆಯ್ಕೆಯಾಗಿದ್ದರು.
ಹಗರಣ ಬೆಳಕಿಗೆ ಬರುತ್ತಿದ್ದಂತೆ ದಿವ್ಯಾ ಊರು ಬಿಟ್ಟಿದ್ದಳು. ಇವರ ಪತಿ ರಾಜೇಶ್ ಹಾಗರಗಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಇದಾದ 20 ದಿನಗಳ ಬಳಿಕ ದಿವ್ಯಾಳನ್ನು ಸಿಐಡಿ ಅಧಿಕಾರಿಗಳು ಪುಣೆಯಲ್ಲಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಐದೂವರೆ ತಿಂಗಳಿನಿಂದ ಜೈಲಿನಲ್ಲಿದ್ದ ರಾಜೇಶ್ ಹಾಗರಗಿಗೆ ಇದೀಗ ಕಲಬುರಗಿ ಹೈಕೋರ್ಟ್ನಿಂದ ಜಾಮೀನು ಮಂಜೂರಾಗಿದೆ.(ದಿಗ್ವಿಜಯ ನ್ಯೂಸ್)