More

    PSI ಹುದ್ದೆ ನೇಮಕಾತಿಯಿಂದ ವಂಚಿತರಾದ ಅಭ್ಯರ್ಥಿಗಳಿಂದ HDK ಕಾರಿಗೆ ಮುತ್ತಿಗೆ ಹಾಕಲು ಯತ್ನ

    ಧಾರವಾಡ: ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರ ಕಾರಿಗೆ ಪಿಎಸ್‌ಐ ಹುದ್ದೆ ನೇಮಕಾತಿಯಿಂದ ವಂಚಿತರಾದ ಅಭ್ಯರ್ಥಿಗಳು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಶನಿವಾರ ಸಂಭವಿಸಿದೆ.

    ಸಮಾನ ಕೆಲಸಕ್ಕೆ ಸಮಾನ ವೇತನಕ್ಕೆ ಆಗ್ರಹಿಸಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕಳೆದ ಒಂದು ವಾರದಿಂದ ಅತಿಥಿ ಉಪನ್ಯಾಸಕರು ಧರಣಿ ನಡೆಸುತ್ತಿದ್ದಾರೆ. ಇವರ ಸಮಸ್ಯೆ ಆಲಿಸಲು ಎಚ್​ಡಿಕೆ ಆಗಮಿಸಿದ್ದರು. ಈ ವೇಳೆ ಜಮಾಯಿಸಿದ ಪಿಎಸ್​ಐ ಹುದ್ದೆ ವಂಚಿತ ಅಭ್ಯರ್ಥಿಗಳು, ನಮಗೆ ನ್ಯಾಯ ಕೊಡಿಸಿ ಎಂದು ಎಚ್​ಡಿಕೆ ಜೊತೆ ಮಾತಿನ ಚಕಮಕಿ ನಡೆಸಿದರು. ವಾಪಸ್​ ಎಚ್​ಡಿಕೆ ಹೋಗುವಾಗ ಮುತ್ತಿಗೆ ಹಾಕಲು ಯತ್ನಿಸಿದ ಅಭ್ಯರ್ಥಿಗಳು ಮೋದಿ..‌.ಮೋದಿ ಎಂದು ಘೋಷಣೆ ಕೂಗುತ್ತಾ ಎಚ್‌ಡಿಕೆ ಅವರ ಕಾರನ್ನು ಬೆನ್ನತ್ತಿ ಹೋದರು.

    ಪಿಎಸ್​ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನೆಲೆ ಇಡೀ ಆಯ್ಕೆಪಟ್ಟಿಯನ್ನೇ ರದ್ದು ಮಾಡಿ ಸರ್ಕಾರ ಆದೇಶಿಸಿದೆ. ಇದನ್ನು ಪ್ರಶ್ನಿಸಿ ಹಲವು ಹೋರಾಟ ಮಾಡುತ್ತಿದ್ದಾರೆ. ತಪ್ಪು ಮಾಡಿದವರಿಗೆ ಶಿಕ್ಷೆ ಕೊಡಿ, ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆ ಆದ ನಮಗೆ ಕೆಲಸ ಕೊಡಿ ಎಂದು ಆಗ್ರಹಿಸುತ್ತಿದ್ದಾರೆ.

    ತುಮಕೂರು ಜಿಲ್ಲಾ BJP ಮುಖಂಡನ ಕೊಲೆಗೆ ಯತ್ನ: ಇಬ್ಬರು ಇಂಜಿನಿಯರ್​ ಸಸ್ಪೆಂಡ್​, ತಲೆಮರೆಸಿಕೊಂಡವನಿಗಾಗಿ ಶೋಧ

    ಕುಣಿಗಲ್​ನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು, 6 ಜನರ ಸ್ಥಿತಿ ಗಂಭೀರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts