ಪುಲ್ವಾಮಾದಲ್ಲಿ ಪೊಲೀಸ್​ ವಿಶೇಷ ಅಧಿಕಾರಿ ಮತ್ತು ಪತ್ನಿಯನ್ನ ಗುಂಡಿಕ್ಕಿ ಕೊಂದ ಉಗ್ರರು

pulwama
Published on

ಪುಲ್ವಾಮಾ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಹರಿಪರಿಗಂ ಗ್ರಾಮದಲ್ಲಿ ವಿಶೇಷ ಪೊಲೀಸ್ ಅಧಿಕಾರಿ ಮತ್ತು ಇವರ ಪತ್ನಿಯನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ಅವರ ಮಗಳಿಗೂ ಗುಂಡೇಟು ಬಿದ್ದಿದ್ದು, ಶ್ರೀನಗರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾನುವಾರ ರಾತ್ರಿ 11 ಗಂಟೆ ಸುಮಾರಿನಲ್ಲಿ ಪೊಲೀಸ್​ ಅಧಿಕಾರಿ ಫಯಾಜ್​ ಅಹ್ಮದ್​ ಅವರ ನಿವಾಸದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಫಯಾಜ್​ ಮತ್ತು ಅವರ ಪತ್ನಿ ರಾಜಾ ಬೇಗಂ ಮೃತಪಟ್ಟಿದ್ದಾರೆ.

ಜಮ್ಮುವಿನ ವಿಮಾನ ನಿಲ್ದಾಣದಲ್ಲಿರುವ ಭಾರತೀಯ ವಾಯು ಪಡೆ ಕೇಂದ್ರವೊಂದರ ಮೇಲೆ ಭಾನುವಾರ ಡ್ರೋನ್​ ಮೂಲಕ ದಾಳಿ ನಡೆದಿತ್ತು. ಇದರ ಬೆನ್ನಲ್ಲೇ ಭಯೋತ್ಪಾದಕರು ಪುಲ್ವಾಮಾದಲ್ಲಿ ಜಮ್ಮು ಮತ್ತು ಕಾಶ್ಮೀರದ ಪೊಲೀಸ್​ ಇಲಾಖೆಯ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net